ಶಿವಮೊಗ್ಗ | ತಾಂತ್ರಿಕ / ವಾಹನ ಚಾಲಕ ಹುದ್ದೆಗೆ ಮಾಜಿ ಸೈನಿಕರಿಂದ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ

ಶಿವಮೊಗ್ಗ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಬೆಂಗಳೂರು ವತಿಯಿಂದ ವಿವಿಧ ತಾಂತ್ರಿಕ ಹಾಗೂ ಭಾರೀ ವಾಹನ ಮತ್ತು ಲಘು ವಾಹನಗಳ ಚಾಲಕರ ಹುದ್ದೆಗಳಿಗೆ ಮಾಜಿ ಸೈನಿಕರುಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯ ಅರ್ಹತೆ ಆಧಾರದ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಈಗಾಗಲೇ ಚಾಲ್ತಿಯಲ್ಲಿದ್ದು, www.isro.gov.in ಅಥವಾ www.ursc.gov.in ಜಾಲತಾಣದ ಮೂಲಕ ನ. 13 ರೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಲಾಗಿರುವ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ. ಸಿ.ಎ. ಹಿರೇಮಠ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author