ಶಿವಮೊಗ್ಗ, ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸಂಘಟನೆಯ ಶಿವಮೊಗ್ಗ ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮದ ಹೆಚ್. ಚಂದ್ರಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಘಟನಾತ್ಮಕ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. ಸಂಘಟನೆಯ ತತ್ವ ಮತ್ತು ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ಸಂಘಟನೆಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಜವಾಬ್ದಾರಿಯನ್ನು ಹೆಚ್. ಚಂದ್ರಪ್ಪ ಅವರಿಗೆ ವಹಿಸಲಾಗಿದೆ.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯಗಳು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು, ಸಂವಿಧಾನಾತ್ಮಕ ಹಕ್ಕುಗಳಿಗಾಗಿ ಹೋರಾಟ ನಡೆಸುವುದು ಹಾಗೂ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ನೇಮಕಾತಿ ಆದೇಶದಲ್ಲಿ ಸೂಚಿಸಲಾಗಿದೆ.
ಈ ನೇಮಕಾತಿ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.
