ಶಿವಮೊಗ್ಗ | ನಗರದ 3 ಇಎಸ್ಐಸಿ ಡಿಸ್ಪೆನ್ಸರಿ ಶಾಸಕ ಎಸ್. ಎನ್. ಚನ್ನಬಸಪ್ಪ ದಿಢೀರ್ ಭೇಟಿ : ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ!
ಔಷಧಿಗಳ ಕೊರತೆ ನೀಗಿಸುವುದು: ಕಾರ್ಮಿಕರಿಗೆ ಅಗತ್ಯವಿರುವ ಪ್ರಮುಖ ಔಷಧಿಗಳ ಕೊರತೆಯಾಗದಂತೆ ಮುಂಚಿತವಾಗಿಯೇ ದಾಸ್ತಾನು ಇಟ್ಟುಕೊಳ್ಳಬೇಕು ಹಾಗೂ ಯಾವುದೇ ರೋಗಿಗಳನ್ನು ಹೊರಗಿನ ಮೆಡಿಕಲ್ಗಳಿಗೆ ಕಳುಹಿಸದೆ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧ ಒದಗಿಸಬೇಕು. ವೈದ್ಯರ ಕರ್ತವ್ಯ ನಿಷ್ಠೆ: ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಪಾಲನೆ ಮಾಡಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸೂಕ್ತ ಸಮಯದಲ್ಲಿ ಪ್ರಾಥಮಿಕ ಹಾಗೂ ತುರ್ತು ಚಿಕಿತ್ಸೆ ನೀಡಬೇಕು. ಮೂಲಸೌಕರ್ಯ & ನೈರ್ಮಲ್ಯ: ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಮೂಲಸೌಕರ್ಯಗಳ ಕೊರತೆ ಇರದಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರು ತಿಳಿಸಿದರು.
Continue Reading




