ಶಿವಮೊಗ್ಗ | ಮಳೆ’ ಗಾಳಿಯಿಂದ ಅಪಾರ ಹಾನಿ ; ಕೂಡಲೇ ಸೂಕ್ತ ಪರಿಹಾರಕ್ಕೆ ಆಗ್ರಹ

ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಎನ್. ಕೆ. ಜಗದೀಶ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಾಯಿತು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಅವರು ಧನಂಜಯ್ ಸರ್ಜಿ ಅವರು ಶಿವಮೊಗ್ಗ ಗ್ರಾಮಾಂತರದ […]

Continue Reading

ಐಜಿಪಿ ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಘೋಷಣೆ

ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6, 2026 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಗುವುದು.

Continue Reading

ಸಾಗರ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು

ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.

Continue Reading

ಶಿವಮೊಗ್ಗ | ಫೇಸ್‌ಬುಕ್‌ ಜಾಹೀರಾತನ್ನು ನಂಬಿದ ಲಕ್ಷಾಂತರ ರೂಪಾಯಿ ಕಳೆದುಕೊಂಡ

ದೂರುದಾರರು ಕಳೆದ ಏಪ್ರಿಲ್ 14 ರಂದು ಫೇಸ್‌ಬುಕ್ ನೋಡ್ತಿದ್ದಾಗ ಪಿಎಂಇಜಿಪಿ ಸಾಲದ ಕುರಿತಾದ ವಿಡಿಯೋವೊಂದನ್ನು ಗಮನಿಸಿದ್ದರು. ಆ ವಿಡಿಯೋದಲ್ಲಿದ್ದ ಪೋನ್​ ನಂಬರ್​ ಒಂದಕ್ಕೆ ಕರೆ ಮಾಡಿ ಮಾಡಿ 50 ಲಕ್ಷ ರೂಪಾಯಿ ಸಾಲದ ಬೇಡಿಕೆ ಇಟ್ಟಿದ್ದರು. ಈ ವೇಳೆ ವಂಚಕರು ದೂರುದಾರರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ದಾಖಲೆಗಳನ್ನು ವಾಟ್ಸಾಪ್ ಮೂಲಕ ಪಡೆದುಕೊಂಡಿದ್ದರು. ದಾಖಲೆಗಳನ್ನು ಪಡೆದ ಮರುದಿನವೇ ದೂರುದಾರರಿಗೆ ಕರೆ ಮಾಡಿದ ವಂಚಕರು, ಸಾಲದ ಅರ್ಜಿ ಭರ್ತಿ ಮಾಡಿಸಿ ಸಹಿ ಹಾಕಿಸಿಕೊಂಡಿದ್ದರು. ತದನಂತರ […]

Continue Reading

ಭದ್ರಾವತಿ | ಒಂದೇ ಮನೆ ಇಬ್ಬರಿಗೆ ಬಾಡಿಗೆ ನೀಡಿದ ಮಾಲೀಕ? ; ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ ERV ಸಿಬ್ಬಂದಿಗಳು

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಇಆರ್‌ವಿ (ERV) ಸಿಬ್ಬಂದಿಗಳು, ಗಲಾಟೆ ಮಾಡುತ್ತಿದ್ದ ಗುಂಪನ್ನು ಚದುರಿಸಿ ಶಾಂತಿ ಕಾಪಾಡುವಂತೆ ಸೂಚನೆ ನೀಡಿದರು. ಸ್ಥಳದಲ್ಲೇ ಎರಡೂ ಕಡೆಯವರ ವಾದವನ್ನು ಆಲಿಸಿದ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕಟ್ಟಡದ ಬಾಡಿಗೆ ವಿಚಾರವಾಗಿ ಉಂಟಾಗಿರುವ ಗೊಂದಲವನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಲು ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ

ಕೇಸನ್ನು ಬಿ ರಿಪೋರ್ಟ್ ಮಾಡಬೇಕೆಂದರೆ ಆನ್‌ಲೈನ್ ಮೂಲಕ ಹಣ ನೀಡಲು ಸಿದ್ಧರಿರಿ ಎಂದು ಬೇಡಿಕೆ ಇಟ್ಟಿದ್ದನು. ಇದರಿಂದ ಎಚ್ಚೆತ್ತುಕೊಂಡ ದೂರುದಾರರು, ತಮ್ಮ ಬಳಿ ಯಾವುದೇ ಆನ್‌ಲೈನ್ ಪಾವತಿ ಆಪ್‌ಗಳಿಲ್ಲ ಎಂದು ಹೇಳಿ, ಖುದ್ದಾಗಿ ಕಚೇರಿಯಲ್ಲೇ ಭೇಟಿಯಾಗೋಣ ಎಂದಿದ್ದಾರೆ. ತಕ್ಷಣವೇ ಗಾಬರಿಗೊಂಡ ವಂಚಕ ವಾಟ್ಸಾಪ್ ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಅಧಿಕಾರಿ ಕೂಡಲೇ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಂತಹ ಯಾವುದೇ ಅಧಿಕಾರಿ ಅಲ್ಲಿಲ್ಲ ಮತ್ತು ಅವರ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ ಎಂಬ ಸತ್ಯ […]

Continue Reading

ಶಿವಮೊಗ್ಗ | ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

ಅಧ್ಯಕ್ಷತೆ ವಹಿಸಿದ್ದ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ಪ್ರಶಾಂತ್ ಮಾತನಾಡಿ ಈ ಮಹಾವಿದ್ಯಾಲಯವು ಬೆಂಗಳೂರು ಮತ್ತು ಮಂಗಳೂರನ್ನು ಹೊರತುಪಡಿಸಿ ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಧಾರವಾಡ ಜಿಲ್ಲೆಗಳ ಏಕೈಕ ಮಹಿಳಾ ಬಿಇಡಿ ಕಾಲೇಜು ಇದಾಗಿದೆ. ವಿದ್ಯಾರ್ಥಿನಿಯರು ಇಲ್ಲಿನ ಶೈಕ್ಷಣಿಕ ವ್ಯವಸ್ಥೆಯ ಪ್ರಯೋಜನ ಪಡೆದು ಉನ್ನತಿ ಸಾಧಿಸಬೇಕೆಂದು ಆಶಿಸಿದರು. ವೇದಿಕೆಯಲ್ಲಿ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಎಂ. ಮುಸವಿರ್ ಭಾಷಾ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್. ಶ್ಯಾಮ ಸುಂದರ್, ಡಾ. ಮನಮೋಹನ್ ಸಿಂಗ್ […]

Continue Reading

ಶಿವಮೊಗ್ಗ | ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Continue Reading

ಶಿವಮೊಗ್ಗ | ಅಪ್ರಾಪ್ತನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

ಘಟನೆಯಲ್ಲಿ ಮಚ್ಚೊಂದು ಅಪ್ರಾಪ್ತನ ತಲೆಯಲ್ಲಿ ಸಿಲುಕಿಕೊಂಡಿದ್ದು, ಆ ಸ್ಥಿತಿಯಲ್ಲಿಯೇ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಟೈಲ್ಸ್ ಕೆಲಸ ಮಾಡುವ 17 ವರ್ಷದ ಎಂದು ಗುರತಿಸಲಾಗಿದೆ.ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆತುಂಗಾ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯ ಸಂಬಂಧ ಪೊಲೀಸ್ ಮಾಹಿತಿ ಪ್ರಕಾರ, ಘಟನೆಯಲ್ಲಿ ಯುವಕ ಸ್ಥಿತಿ ಗಂಭೀರವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಮಾತನಾಡುವ […]

Continue Reading