ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ; ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಾರ್ಮಾಡಿ ಘಾಟಿಯ […]

Continue Reading

ಶಿವಮೊಗ್ಗ | ಬಂಗಾರದ ಸರ ಸುಲಿಗೆ ; 48 ಗಂಟೆ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ನಿಖಿಲ್ ಬಿ., ಐಪಿಎಸ್ – ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–1, ಶ್ರೀ ರಮೇಶ್ ಕುಮಾರ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–2 ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರಕಾಶ್ ರಾಠೋಡ್, DySP ಭದ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ ಅವರ ನೇತೃತ್ವದಲ್ಲಿ, ಎ.ಎಸ್.ಐ ದಿವಾಕರ್ ರಾವ್, ಸಿಪಿಸಿ ಯದುನಂದನ ಹಾಗೂ ಸಂತೋಷಕುಮಾರ ರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ,ಆರೋಪಿತರಾದ […]

Continue Reading

ಗ್ರಾ.ಪಂ.ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ : ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

Continue Reading

ಶಿವಮೊಗ್ಗ | ಇಂದಿನಿಂದ ಮಾರಿಜಾತ್ರೆ ; ಮಾರಿಕಾಂಬೆಯನ್ನು ಬರಮಾಡಿಕೊಳ್ಳಲು ಸಜ್ಜಾದ ಸಾಗರ

ಸಾಗರದ ಮಾರಿಕಾಂಬಾ ಜಾತ್ರೆ ಎಂದರೆ ಅದಕ್ಕೊಂದು ಜನಪದದ ಟಚ್ ಇರುತ್ತದೆ. ಜಾತ್ರೆ ಆರಂಭದಿಂದ ಅಮ್ಮನನ್ನು ವನಕ್ಕೆ ಬಿಡುವ ತನಕ ನಡೆಯುವ ಬಹುತೇಕ ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಎತ್ತಿಹಿಡಿಯುವ ನಿಟ್ಟಿನಲ್ಲಿ ನಮ್ಮ ಹಿರಿಯರು ಹೆಣೆದು ಕೊಟ್ಟಿದ್ದಾರೆ. ಪ್ರತಿಯೊಂದು ಆಚರಣೆಯೂ ನಮ್ಮ ಜಾನಪದ ಶೈಲಿಯೊಂದಿಗೆ ಹೆಣೆದು ಕೊಂಡಿರುವುದು ವಿಶೇಷ. ಇಂದು ಅಮ್ಮನವರ ಆಗಮನ : ಫೆಬ್ರವರಿ 3ರ ಮಂಗಳವಾರ ತವರು ಮನೆ ದೇವಸ್ಥಾನದಲ್ಲಿ ಅಮ್ಮನವರ ಪ್ರತಿಷ್ಟಾಪನೆ ನಡೆಯಲಿದೆ. ಇದಕ್ಕೆ ಬೇಕಾದ ಪೂರ್ವಸಿದ್ದತೆ ನಡೆದಿದೆ. ಸೋಮವಾರ ರಾತ್ರಿಯಿಂದಲೇ ವಿಶೇಷ ಪೂಜೆ […]

Continue Reading

ಶಿವಮೊಗ್ಗ | ಕ್ಯಾಂಟರ್ ನಡುವೆ ಭೀಕರ ಅಪಘಾತ: ಸೊರಬದ ಇಬ್ಬರು ಸ್ಥಳದಲ್ಲೇ ಸಾವು

ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Continue Reading

ಶಿವಮೊಗ್ಗ | ಜೈಲಿನ ಆವರಣದಲ್ಲಿ ಕಪ್ಪು ಗಮ್ ಟೇಪ್ ಸುತ್ತಿದ್ದ ಅನುಮಾನಾಸ್ಪದ ವಸ್ತು ವಶ

ಪೊಟ್ಟಣವನ್ನು ಬಿಚ್ಚಿದಾಗ ಅದರಲ್ಲಿ ಒಂದು ನೀಲಿ ಬಣ್ಣದ ಪೊಕೊ (POCO) ಆಂಡ್ರಾಯ್ಡ್ ಮೊಬೈಲ್ ಫೋನ್, 93 ಬ್ರಾಂಡ್‌ನ 3 ಕಟ್ಟು ಬೀಡಿಗಳು ಹಾಗೂ ಬಿಡಿ 20 ಬೀಡಿಗಳು, 2 ಕ್ಲಾಸಿಕ್ ಕನೆಕ್ಟ್ ಸಿಗರೇಟ್ ಪ್ಯಾಕ್‌ಗಳು, 1 ಕಿಂಗ್ ಲೈಟ್ಸ್ ಸಿಗರೇಟ್ ಪ್ಯಾಕ್ ಹಾಗೂ ಒಂದು ಕಪ್ಪು ಬಣ್ಣದ ಚಾರ್ಜಿಂಗ್ ಕೇಬಲ್ ಪತ್ತೆಯಾಗಿವೆ. ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಅಕ್ರಮವಾಗಿ ಎಸೆದ ಅನಾಮಧೇಯ ವ್ಯಕ್ತಿಗಳು ಹಾಗೂ ಇವುಗಳನ್ನು ಪಡೆಯಲು ಯತ್ನಿಸಿದ ಕೈದಿಗಳ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ-2022 ರ […]

Continue Reading

ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್

ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]

Continue Reading

ಕೇಂದ್ರದ ಬಜೆಟ್, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ : ಬಿ. ವೈ. ವಿಜಯೇಂದ್ರ

ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು […]

Continue Reading