ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದು ; ಹೈಕೋರ್ಟ್ ಮಹತ್ವದ ಆದೇಶ

ಮಾರತ್‌ಹಳ್ಳಿ ನಿವಾಸಿಯಾಗಿರುವ ಎ. ಸುನೀಲ್ ಕುಮಾರ್ ಎಂಬುವರು ತಾನು ಖರೀದಿಸಿದ್ದ ಬೈಕ್ ಅನ್ನು ತದನಂತರ ತಬ್ರೇಜ್ ಎಂಬುವರಿಗೆ ಮಾರಾಟ ಮಾಡಿದ್ದರು. 2020ರ ಜೂನ್ 18ರಂದು ಈ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹನುಮಂತ ಎಂಬುವರು ಮೃತಪಟ್ಟಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಕರಣ ಮೃತನ ಕುಟುಂಬಕ್ಕೆ 33.07 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಹಾಗೂ ಈ ಮೊತ್ತವನ್ನು ಸುನೀಲ್ ಕುಮಾರ್ ಮತ್ತು ತಬ್ರೇಜ್ ಇಬ್ಬರೂ ಜಂಟಿಯಾಗಿ ಪಾವತಿಸುವಂತೆ ಆದೇಶಿಸಿತ್ತು. ನ್ಯಾಯಾಧೀಕರಣದ ಈ ಆದೇಶವನ್ನು ಪ್ರಶ್ನಿಸಿ ವಾಹನದ ಮಾಲೀಕ […]

Continue Reading

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ- 1 ಫೆಬ್ರವರಿ 28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಿತು. ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ಕಲಾ ವಿಭಾಗದಲ್ಲಿ 1.42 ಲಕ್ಷ, ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆಳ್ವಾಸ್ಗೆ ಮೊದಲ ರ್ಯಾಂಕ್ ಇದೇ ಪ್ರಥಮ ಬಾರಿಗೆ ದಾಖಲೆಯ ಶೇ. 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ. ರಾಜ್ಯಕ್ಕೆ ಮೂಡಬಿದರೆಯ ಆಳ್ವಾಸ್ […]

Continue Reading

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಗುರುವಾರ, ಏಪ್ರಿಲ್ 9 ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಇನ್ನೊಂದೆಡೆ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ‘‘ಈ ಬಾರಿ ಡಿಜಿ ಲಾಕರ್‌ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದ್ದು, […]

Continue Reading

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೋಭಾ ಅವರ ಮನೆ, ಶಿಕಾರಿಪುರ ಹಾಗೂ ಸಾಗರದಲ್ಲಿರುವ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ. ಅವರ ಮ್ಯಾನೇಜರ್ ರಾಘವೇಂದ್ರ ಅವರ ಶಿಕಾರಿಪುರ ಮನೆ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

HSRP ಇನ್ನುಮುಂದೆ ಕಡ್ಡಾಯವಿಲ್ಲ ; ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ವಂಚನೆ

ಆದರೆ ಇದೀಗ ಅಚ್ಚರಿ ಎಂಬಂತೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಎಂಬ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಹೌದು, ಇದುವರೆಗೂ ಏಳು ಬಾರಿ ಕೊನೆಯ ದಿನಾಂಕವನ್ನು ವಿಸ್ತರಿಸಿದರೂ ರಾಜ್ಯದಲ್ಲಿ ಕೇವಲ ಶೇ 29 ರಷ್ಟು ವಾಹನ ಮಾಲಿಕರು ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಪಡೆದಿದ್ದರು. ಹೀಗಾಗಿ ವಾಹನ ಸವಾರರು ನಿರಾಸಕ್ತಿ ತೋರಿದ ಪರಿಣಾಮ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಬಂದಿದೆ. ಆದರೆ ಇದುವರೆಗೂ ಆನ್‌ಲೈನ್‌ ನಲ್ಲಿ, ಆರ್‌ಟಿಓ ಗಳಲ್ಲಿ ಸರತಿಯಲ್ಲಿ ನಿಂತು ಹಣ ಕಟ್ಟಿ ಎಚ್‌ಎಸ್‌ಆರ್‌ಪಿ ನಂಬರ್‌ […]

Continue Reading

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ; ಹವಾಮಾನ ಇಲಾಖೆ ಎಚ್ಚರಿಕೆ

ಇನ್ನುಳಿದಂತೆ ಮುಂದಿನ ಆರು ದಿನಗಳ ಕಾಲ 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಂಭವವಿದೆ. ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗುಡುಗಿನ ಅಬ್ಬರ ಕೂಡ ಇರಲಿದೆ ಎಂದು ಇಲಾಖೆ ತಿಳಿಸಿದೆ.

Continue Reading

ರಾಜ್ಯ ಬಜೆಟ್ Highlights

ಇಂದಿರಾ ಕಿಟ್ ವಿತರಣೆಗೆ 6,200 ಕೋಟಿ ಮೀಸಲು. ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇಂದಿರಾ ಕಿಟ್ ವಿತರಣೆಗೆ 2026- 27ನೇ ಸಾಲಿನಲ್ಲಿ 6,200 ಕೋಟಿ ಮೀಸಲು ಇಡಲಾಗಿದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ […]

Continue Reading

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. ‘ಖಾತರಿ’ ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ […]

Continue Reading

ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ […]

Continue Reading

ರಾಜ್ಯದಾದ್ಯಂತ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರ ಮತ್ತು ನಗದನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಹಾಸನ ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇಇ) ಸತ್ಯನಾರಾಯಣ ಅವರ ಮನೆ, ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಇಇ ಸತೀಶ್ ಅವರ ಮನೆ ಮತ್ತು ಕಚೇರಿ, ಬಾಗಲಕೋಟೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಮುಖ್ಯ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆ, ಮೈಸೂರಿನಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು […]

Continue Reading