ಶಿವಮೊಗ್ಗ | ಇಎಸ್ಐಸಿ ಆಸ್ಪತ್ರೆಗಳಲ್ಲಿ ತಕ್ಷಣ ಒಪಿಡಿ ಆರಂಭಿಸಲು ಹಾಗೂ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಲು ಶಾಸಕರ ಸೂಚನೆ
1. ಒಪಿಡಿ (OPD) ಸೇವೆ ತಕ್ಷಣ ಆರಂಭ: ಇಎಸ್ಐ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ (OPD) ಕಾರ್ಯನಿರ್ವಹಿಸದೆ ಕಾರ್ಮಿಕರು ಚಿಕಿತ್ಸೆಗಾಗಿ ಪರದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಕೂಡಲೇ ಒಪಿಡಿ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಹಾಗೂ ಅಗತ್ಯವಿರುವ ಹೆಚ್ಚುವರಿ ಕೊಠಡಿ ಮತ್ತು ಸ್ಥಳಾವಕಾಶವನ್ನು ತಕ್ಷಣವೇ ಒದಗಿಸಲು ಸೂಚಿಸಿದರು. 2. ವೈದ್ಯರ ಕೊರತೆ ನೀಗಿಸಲು ಕ್ರಮ: ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳ ಕುರಿತು ಮಾಹಿತಿ ಪಡೆದ ಶಾಸಕರು, ಈ ಕೊರತೆಯನ್ನು ಶೀಘ್ರವಾಗಿ ಭರ್ತಿ ಮಾಡುವ ನಿಟ್ಟಿನಲ್ಲಿ ರಾಜ್ಯ […]
Continue Readingಶಿಕ್ಷಕರ ಬಳಿ ತೆರಳಿ, ಸರ್ಕಾರಿ ಶಾಲೆಯಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ ಸಚಿವ ಮಧು ಬಂಗಾರಪ್ಪ
ತಂದೆ-ತಾಯಿ ಜನ್ಮ ನೀಡಿದರೆ, ದಾರಿ ತೋರಿಸುವವರು ಶಿಕ್ಷಕರು: ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಮಕ್ಕಳು ಬಹಳ ಚೆಂದವಾಗಿ ಮಾತನಾಡಿದರು. ಇಲ್ಲಿಯ ಶಿಕ್ಷಕರು ಹೇಗೆ ಕಲಿಸುತ್ತಿದ್ದಾರೆ ಎಂಬುದು ಇಲ್ಲೇ ಅರ್ಥವಾಗುತ್ತದೆ. ತಂದೆ-ತಾಯಿ ಜನ್ಮ ನೀಡಿದರೆ, ಬದುಕಿನ ದಾರಿ ತೋರಿಸುವವರು ಶಿಕ್ಷಕರು. ಸಾವಿರಾರು ಮಕ್ಕಳಿಗೆ ಬದುಕಿನ ದಾರಿ ತೋರಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ” ಎಂದು ಶಿಕ್ಷಕರಿಗೆ ಹೇಳಿದರು. “ಸರ್ಕಾರಿ ಶಾಲೆಯ ಬಗ್ಗೆ ಮಾಧ್ಯಮದಲ್ಲಿ ಟೀಕೆ-ಟಿಪ್ಪಣಿ ಬರುತ್ತಲೇ ಇರುತ್ತವೆ. ಆದರೆ ಈ ಶಾಲೆಯಂತಹ ಸರ್ಕಾರಿ […]
Continue Readingನಿಂಗಮ್ಮನ ಇಡ್ಲಿ ಬಂಡಿ ತೆರವು ಸಮರ್ಥಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಹಾಸನ ಮೂಲದ ನಿಂಗಮ್ಮ ಅವರು ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಫುಟ್‌ಪಾತ್‌ನಲ್ಲಿ ಸಣ್ಣ ತಳ್ಳುವ ಗಾಡಿಯಲ್ಲಿ ಇಡ್ಲಿ, ದೋಸೆ ಮಾರಾಟ ಮಾಡುವ ಟಿಫನ್ ಸೆಂಟರ್ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಣ್ಣ ಸಾಲ ಪಡೆದು, ಕಷ್ಟಪಟ್ಟು ಬದುಕು ಕಟ್ಟಿಕೊಂಡಿದ್ದ ನಿಂಗಮ್ಮ ತಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸುತ್ತಿದ್ದಾರೆ. ಇತ್ತೀಚಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಂಗಮ್ಮ ಅವರ ಸ್ವಾವಲಂಬನೆಯ ಕಥೆಯನ್ನು ಉಲ್ಲೇಖಿಸಿ, ಅವರ ಸಾಧನೆ ಹಾಗೂ ಶ್ರಮವನ್ನು […]
Continue Readingಶಿವಮೊಗ್ಗ | ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮುಖ್ಯ ಶಿಕ್ಷಕಿ ಶ್ರೀಮತಿ ರತ್ನಕುಮಾರಿಯವರು ಕರ್ತವ್ಯ ನಿರ್ವಹಿಸುತ್ತಿರುವ ಸಮಟಗಾರು ಎಂಬ ಪುಟ್ಟ ಹಳ್ಳಿಯಲ್ಲಿ ಇಂದಿಗೂ ರಸ್ತೆಯು ಇಲ್ಲ ಬೀದಿ ದೀಪವು ಇಲ್ಲ..!
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಗೌರವಾನ್ವಿತ ಸಚಿವರಾದ ತಾವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸದರಿ ರಸ್ತೆಗೆ ಡಾಂಬರೀಕರಣ ಮತ್ತು ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಇಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮತ್ತು ಈ ಊರಿನ ಮಹಿಳೆಯರಿಗೆ, ವೃದ್ಧರಿಗೆ ಯಾವುದೇ ಅಡೆ ತಡೆ ಇಲ್ಲದೆ ಸುಲಲಿತವಾಗಿ ಸಂಚರಿಸಲು ತಾವು ಅವಕಾಶ ಕಲ್ಪಿಸಿಕೊಡಬೇಕೆಂದು ನೈಜಹೋರಾಟಗಾರರ ವೇದಿಕೆ ತಮ್ಮಲ್ಲಿ ವಿನಯಪೂರ್ವಕವಾಗಿ ನೈಜ ವೇದಿಕೆ ಆಗ್ರಹ ಪಡಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊಟ್ಟಮೊದಲ ಬಾರಿಗೆ ಸಮಟಗಾರು ಎಂಬ ಈ […]
Continue Readingಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿ ಮುದ್ದು ಮಕ್ಕಳು ಕೃಷ್ಣ ಮತ್ತು ರಾಧೆಯ ವೇಷ ಹಾಕಿರುವ ಕೆಲ ವಿಶೇಷ ಫೋಟೋಗಳನ್ನು ವೀಕ್ಷಿಸಿ
ಶಿವಮೊಗ್ಗದ ಸೂಪರ್ ಕಾಪ್ ಎಂದೇ ಪ್ರಸಿದ್ದಿ ಪಡೆದಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ಅವರ ಮುದ್ದು ಪುಟಾಣಿ ಪ್ರಾಂಶಿ T.S. ಇವರ ಫೋಟೋ ವೀಕ್ಷಿಸಿ 👇 ಶಿವಮೊಗ್ಗದ ಕರ್ನಾಟಕ ಬ್ಯಾಂಕ್ ಉದ್ಯೋಗಿ ಚಿದಂಬರ ಹಾಗೂ ಮಹಾವೀರ ಶಾಲೆಯ ಶಿಕ್ಷಕರಾದ ವಂದನಾ ಅವರ ಪುತ್ರ ಕ್ರಿಷಿವ್ ಶರ್ಮನನ್ನು ಈ ಕೆಳಗಿನ ಫೋಟೋದಲ್ಲಿ ನೋಡಿ ಪುಟಾಣಿ ಧ್ವನಿ ತಂದೆ ಮನೋಹರ್ ವೃತ್ತಿ ತೆಂಗಿನಕಾಯಿ ಮಂಡಿ ಹಾಗೂ ತಾಯಿ ರೇಖಾ ಊರು ತಿಪಟೂರ್ ಈ ಪುಟಾಣಿ ಫೋಟೋ 👇 ಪುಟಾಣಿ ನಿಭಾ […]
Continue Readingಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
2024-25 ಹಾಗೂ 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), […]
Continue Readingಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://www.kuvempu.ac.in ಗೆ ಭೇಟಿ ನೀಡಬಹುದು ಎಂದು ಕುವೆಂಪು ವಿವಿಯ ಪ್ರಧಾನ ಸಂಶೋಧಕರಾದ ಪ್ರೊ. ಎನ್.ಬಿ.ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿದಿದ್ದಾರೆ.
Continue Reading




