ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ ; ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ
ಪರೀಕ್ಷಾ ಸಿದ್ಧತೆಗಾಗಿ ಈಗಾಗಲೇ 3 ಪೂರ್ವಸಿದ್ಧತಾ (Preparatory) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಮಕ್ಕಳಲ್ಲಿನ ಭಯವನ್ನು ಹೋಗಲಾಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳು ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೊಸಹೋಗಬಾರದು” ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿನಂತಿಸಿದರು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗಿದೆ. ಪ್ರತಿದಿನ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಪೋಲೀಸ್ ಸಿಬ್ಬಂದಿಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿದೆ. ಆಯಾ ಜಿಲ್ಲಾ ಆಡಳಿತದ ಮೂಲಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. […]
Continue Readingಸಾಗರ | ಬಸ್ ನಿಲ್ದಾಣ ನಿರ್ಮಿಸಿ ; ಎಬಿವಿಪಿ ಮನವಿ
ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ಎಲ್.ಬಿ.ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ., ಸುಜಿತ್ ಡಿ., ಪ್ರಜ್ವಲ್, ನಿತಿನ್ ಕುಮಾರ್ ಇನ್ನಿತರರು ಹಾಜರಿದ್ದರು.
Continue Readingಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ
ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್‌ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]
Continue Readingಮಗನ ಬೈಕ್ ಕ್ರೇಜ್, ಪಾಲಕರಿಗೆ ಶಾಕ್ ; ₹54 ಸಾವಿರ ದಂಡದ ಬಿಸಿ
“ನಮಗೆ ಲೈಸೆನ್ಸ್ ಇಲ್ಲ ಸರ್” ಎಂಬ ಆ ಬಾಲಕರ ಮುಗ್ಧ ಮಾತುಗಳು ಅವರ ಪೋಷಕರ ಪಾಲಿಗೆ ದೊಡ್ಡ ಸಂಕಷ್ಟವನ್ನೇ ತಂದೊಡ್ಡಿದವು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ಬೈಕ್ ಮಾಲೀಕರನ್ನು ನ್ಯಾಯಾಲಯದ ಕಟಕಟೆಗೆ ಎಳೆದು ತಂದರು. ನ್ಯಾಯಾಲಯದ ವಿಚಾರಣೆಯ ವೇಳೆ ಪೋಷಕರ ವಾದಗಳು ಫಲ ನೀಡಲಿಲ್ಲ. ಅಪ್ರಾಪ್ತರಿಗೆ ವಾಹನ ನೀಡಿದ ಇಬ್ಬರು ಪೋಷಕರಿಗೆ ಕ್ರಮವಾಗಿ 25,500 ರೂ. ಹಾಗೂ 28,500 ರೂ. ದಂಡ ವಿಧಿಸಿ ಜೆ.ಎಂ.ಎಫ್.ಸಿ ನ್ಯಾಯಾಲಯ ಕಠಿಣ ಆದೇಶ […]
Continue Readingಶಿವಮೊಗ್ಗ | ರಂಜಾನ್ ಹಬ್ಬಕ್ಕೆ ಮುನ್ನವೇ ಈದ್ಗಾ ಮೈದಾನಕ್ಕೆ ಬ್ಯಾರಿಕೆಡ್ ; ಹಿಂದೂ ಪರ ಸಂಘಟನೆಗಳ ಆಕ್ರೋಶ
ಮಾರ್ಚ್ 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡುವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಎಸ್ಪಿ ನಿಖಿಲ್ […]
Continue Readingನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ವಿಧಾನಸಭೆಯಲ್ಲಿ ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ನುಡಿಗಳು: ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, “ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಪ್ರಿಲ್ 2ರವರೆಗೆ ಸುಮಾರು 8.66 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ನಿವಾರಿಸಲು ನಮ್ಮ ಸರ್ಕಾರ ವರ್ಷದಲ್ಲಿ 3 ಪರೀಕ್ಷೆಗಳ ಅವಕಾಶ (Exam 1, 2 & 3) ನೀಡಿದೆ. ಬಡ ವಿದ್ಯಾರ್ಥಿಗಳಿಗೆ ಹೊರೆಯಾಗದಿರಲಿ ಹಾಗೂ ಪೋಷಕರ ಬಳಿ ಮತ್ತೆ […]
Continue Readingಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸುವಂತಹ ‘ಬ್ಲಾಕ್ ಮೇಲ್’ ತಂತ್ರಗಳನ್ನು ಸರ್ಕಾರ ಒಪ್ಪುವುದಿಲ್ಲ ; ಶಿಕ್ಷಣ ಸಚಿವರ ಸ್ಪಷ್ಟನೆ
ನಮಗೆ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಹಿತದೃಷ್ಟಿ ಮತ್ತು ಅವರ ಭವಿಷ್ಯವೇ ಸರ್ವೋಚ್ಚ. ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದರು.
Continue Readingಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನಲೊಬ್ಬ ಕಾಮುಕ ಪ್ರಾಧ್ಯಪಕ ; ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್, ನಿರಂತರ ಕಿರುಕುಳ
ಹೌದು ಗುರುವಿನ ಸ್ಥಾನದಲ್ಲಿ ಇದ್ದು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಬೇಕಾಗಿದ್ದ ಪ್ರಾಧ್ಯಪಕ ಡಾ.ಮುದುಕಪ್ಪ. ಜಿ ವಿದ್ಯಾರ್ಥಿನಿ ಮೇಲೆ ಕಾಮುಕ ದೃಷ್ಟಿ ಹಾಯಿಸಿದ್ದಾನೆ. ವಿದ್ಯಾರ್ಥಿನಿಯ ಮೊಬೈಲ್ ಗೆ ಅಶ್ಲೀಲ, ಹೊಲಸು ಅಸಹ್ಯ ಕಾಮುಕತೆಯ ಮೆಸೇಜ್ ಕಳಿಸಿದ್ದಾನೆ ಇಷ್ಟೇ ಅಲ್ಲದೆ ಪ್ರಾಜೆಕ್ಟ್ ಮಾರ್ಕ್ಸ್, ಇಂಟರ್ನಲ್ ಮಾರ್ಕ್ಸ್ ಬೇಕಾದರೆ ವಿದ್ಯಾರ್ಥಿನಿ ಇವನು ಹೇಳಿದಂತೆ ಕೇಳಬೇಕಂತೆ. ಅಂತಿಮ ವರ್ಷದ ಬಿ. ಎ. ವಿದ್ಯಾರ್ಥಿನಿಗೆ ವಾಟ್ಸಪ್ ನಲ್ಲಿ ನಿರಂತರವಾಗಿ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿರುವುದು ತಿಳಿದುಬಂದಿದೆ. ಸಹ್ಯಾದ್ರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ […]
Continue Readingಸರ್ಕಾರದ ಸಚಿವರುಗಳ ಅಸಮರ್ಪಕ ಉತ್ತರ ; ಸಭಾತ್ಯಾಗ ಮಾಡಿದ ಸ್ಪೀಕರ್ ಯು. ಟಿ. ಖಾದರ್
ಗೃಹ ಸಚಿವ ಪರಮೇಶ್ವರ್ ಅವರು ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಪೈಕಿ 84 ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದರು. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಸದನ ಆರಂಭವಾದಾಗಿನಿಂದಲೂ ಸಚಿವರಿಂದ ಸರಿಯಾದ ಉತ್ತರ ಬರುತ್ತಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತ ಅಶೋಕ್ ಆಕ್ರೋಶ ಹೊರ ಹಾಕಿದರು. ಸಚಿವರು ಗೈರಾಗಿದ್ದಕ್ಕೆ ಮೊದಲೇ ಸಿಟ್ಟಾಗಿದ್ದ ಸ್ಪೀಕರ್, ಸದನದಲ್ಲಿ ಶಾಸಕರು ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗುವುದಿಲ್ಲ. ಚುಕ್ಕೆ ಗುರುತಿಲ್ಲದ ಪ್ರಶ್ನೆಯೇ ಜಾಸ್ತಿ […]
Continue Reading




