ಶಿವಮೊಗ್ಗದಲ್ಲಿ ರೂ.13.5 ಕೋಟಿ ವೆಚ್ಚದ ಕೆಪಿಎಸ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಸಿಎಸ್‌ಆರ್ ನಿಧಿಯಡಿ ರಾಜ್ಯದಾದ್ಯಂತ 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್‌ನ ನೆರವಿನಿಂದ ನಿರ್ಮಾಣವಾಗಲಿರುವ ಈ ಕಟ್ಟಡದಲ್ಲಿ 35 ಸುಸಜ್ಜಿತ ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಅಕ್ಷರ ದಾಸೋಹ ಭವನ ನಿರ್ಮಾಣವಾಗಲಿದೆ. ಕಟ್ಟಡವನ್ನು ಒಂದುರಿಂದ ಎರಡು ವರ್ಷದೊಳಗೆ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸುವ ಉದ್ದೇಶವಿದ್ದು, […]

Continue Reading

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜ್ವಲಂತ ಅರಣ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಿ : ಅರಣ್ಯ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ

ಇದರೊಂದಿಗೆ ದಶಕಗಳಿಂದ ಬಾಕಿಯಿರುವ ಶರಾವತಿ ಸಂತ್ರಸ್ತರ ಪುನರ್ವಸತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಸ್ಥಳ ಪರಿಶೀಲನೆ ಪೂರ್ಣಗೊಳಿಸಿ ಪ್ರಸ್ತಾವನೆ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಮೈಸೂರು ಪೇಪರ್ ಮಿಲ್ಸ್ (MPM) ಅರಣ್ಯ ವ್ಯಾಪ್ತಿಯಲ್ಲಿ ಮರ ತೆರವುಗೊಳಿಸುವ ನಿರ್ವಹಣಾ ಯೋಜನೆಗೆ (Management Plan) ಆದ್ಯತೆಯ ಮೇರೆಗೆ ಅನುಮೋದನೆ ದೊರಕಿಸಿಕೊಡುವಂತೆ ಬಿ.ವೈ.ರಾಘವೇಂದ್ರ ಅವರು ಮಾನ್ಯ ಸಚಿವರನ್ನು ಕೋರಿದ್ದಾರೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ 766C (ಬೆಕ್ಕೋಡಿ ಯೋಜನೆ) ಅಡಿಯಲ್ಲಿ ಹೊಸನಗರದ ಮಾವಿನಕೊಪ್ಪ ವೃತ್ತದಿಂದ ಅಡುಗೋಡಿವರೆಗಿನ ರಸ್ತೆ ಮತ್ತು ಸೇತುವೆ […]

Continue Reading

ಶಿವಮೊಗ್ಗ | ಮುಂಗಾರು ಬೆಳೆ ವಿಮೆ : ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆ​

ಸಾಲ ಪಡೆಯದ ರೈತರು ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಮೀಪದ ಬ್ಯಾಂಕ್, ಹಣಕಾಸು ಸಂಸ್ಥೆ ಅಥವಾ ಸಿಎಸ್‌ಸಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೃಷಿ, ಕಂದಾಯ, ಸಹಕಾರ ಇಲಾಖೆ, ಬ್ಯಾಂಕ್‌ಗಳು ಅಥವಾ ಸರ್ಕಾರದ ಸಂರಕ್ಷಣೆ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಕೋರಲಾಗಿದೆ.

Continue Reading

ಶಿವಮೊಗ್ಗ | ನವಿಲೆ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಸಹ್ಯಾದ್ರಿ ಕೃಷಿ ಸಂತೆ-2026

ಈ ಸಂತೆಯಲ್ಲಿ ಮಲೆನಾಡು ವಿಶಿಷ್ಟ ಸಿಹಿ ಖಾದ್ಯ ತೊಡೆದೇವು, ಉತ್ತರ ಕರ್ನಾಟಕದ ತಿಂಡಿ-ತಿನಿಸುಗಳು ಹಾಗೂ ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು, ಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನಗಳ ಮಳಿಗೆಗಳೂ ಕೂಡ ಈ ಸಂತೆಯಲ್ಲಿ ಪ್ರಮುಖ ಆಕರ್ಷಣೆಗಳಾಗಿವೆ.ಅಲ್ಲದೆ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಆವರಣದ ಪ್ರಾತ್ಯಕ್ಷಿಕೆಯ ತಾಕುಗಳಾದ ಸಮಗ್ರ ಕೃಷಿ ಪದ್ದತಿ, ಜೇನು ಸಾಕಾಣಿಕೆ ಘಟಕ, ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ, ಜಲ ಕೃಷಿ (ಹೈಡ್ರೋಫೋನಿಕ್ಸ್), ಎರೆಹುಳು ಗೊಬ್ಬರ ತಯಾರಿಕೆ ಘಟಕ, ಕೊಳವೆ ಬಾವಿ ಜಲ ಮರುಪೂರಣ […]

Continue Reading

ಶಿವಮೊಗ್ಗ | ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ; ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಈ ಸಂಬಂಧ ಆ.18ರಂದು ವಿದ್ಯಾರ್ಥಿನಿಯಿಂದ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಈ ಕುರಿತು ಮಕ್ಕಳ ರಕ್ಷಣ ಸಮಿತಿಯೂ ಸಹ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ಸಹ ನಡೆಸಿದೆ.ಅದರಂತೆ ಕಾಲೇಜು ಮುಂಭಾಗ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದು, ದಲಿತ ಸಂಘರ್ಷ ಸಮಿತಿ ವತಿಯಿಂದಲೂ ದೂರು ಸಲ್ಲಿಕೆಯಾಗಿದೆ. ಕಾಮುಕ ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದ್ದು, ಪ್ರಾಂಶುಪಾಲನನ್ನು ಅಮಾನತ್ತು ಮಾಡಿ, ಕಾನೂನು ಕ್ರಮಕ್ಕೆ ಡಿಎಸ್ಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Continue Reading

ಶಿವಮೊಗ್ಗ | ದೋಷಯುಕ್ತ ಮೊಬೈಲ್ ಮಾರಾಟ : ಗ್ರಾಹಕನಿಗೆ ಬಡ್ಡಿ ಸಮೇತ ಹಣ ಹಾಗೂ ಪರಿಹಾರ ನೀಡಲು ಗ್ರಾಹಕ ಆಯೋಗ ಆದೇಶ

ಮೊಬೈಲ್‌ನ ಮೂಲ ಬೆಲೆ 1,650 ರೂ. ಗಳನ್ನು ದಿನಾಂಕ 27/02/2026 ರಿಂದ ವಾರ್ಷಿಕ ಶೇ. 7ರ ಬಡ್ಡಿ ಸೇರಿಸಿ 45 ದಿನಗಳೊಳಗೆ ದೂರುದಾರರಿಗೆ ಮರುಪಾವತಿಸಬೇಕು (ತಪ್ಪಿದಲ್ಲಿ ಶೇ. 10ರ ಬಡ್ಡಿ ಅನ್ವಯ). ಗ್ರಾಹಕರಿಗೆ ಉಂಟಾದ ಮಾನಸಿಕ ವೇದನೆಗಾಗಿ 5,000 ರೂ. ಪರಿಹಾರ ನೀಡಬೇಕು.ದೂರಿನ ಖರ್ಚು-ವೆಚ್ಚವಾಗಿ 10,000 ರೂ. ನೀಡಬೇಕು.ನಿಗದಿತ 45 ದಿನಗಳೊಳಗೆ ಈ ಪರಿಹಾರ ಮೊತ್ತವನ್ನು ಪಾವತಿಸದಿದ್ದರೆ ವಾರ್ಷಿಕ ಶೇ. 10ರ ಬಡ್ಡಿಯನ್ನು ಸೇರಿಸಿ ನೀಡತಕ್ಕದ್ದು.ದೂರುದಾರರು ಆದೇಶವಾದ 45 ದಿನಗಳೊಳಗೆ ಮೊಬೈಲ್ ಫೋನ್‌ ಅನ್ನು ಎದುರುದಾರರಿಗೆ ಹಸ್ತಾಂತರಿಸಬೇಕು […]

Continue Reading

ಶಿವಮೊಗ್ಗ | ಕಸ್ತೂರಿ ರಂಗನ್ ವರದಿಯನ್ನು ಪಕ್ಷಭೇದ ಮರೆತು ವಿರೋಧಿಸಿ : ಮಾಜಿ ಸಚಿವ ಹರತಾಳು ಹಾಲಪ್ಪ

ಕೇರಳ ಸರ್ಕಾರದ ಮಾದರಿಯನ್ನು ಇಲ್ಲಿ ಅನುಸರಿಸಬೇಕು. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬ ತಾರತಮ್ಯ ಇಲ್ಲದೆ ಎಲ್ಲರೂ ಇದನ್ನು ವಿರೋಧ ಮಾಡಬೇಕಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಮಾಲತೇಶ್, ಚಂದ್ರಶೇಖರ್ ಎಸ್., ಮಂಜುನಾಥ್ ಎನ್. ಹಾಜರಿದ್ದರು.

Continue Reading

ಬೆಂಗಳೂರು | 15 ಸಾವಿರ ಶಿಕ್ಷಕರ ನೇಮಕಾತಿ : ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ

ಅಧಿಸೂಚನೆ ಹಾಗೂ FAQ ಓದಿದ ನಂತರವೂ ಯಾವುದೇ ಗೊಂದಲ ಅಥವಾ ಅನುಮಾನ ಬಗೆಹರಿಯದಿದ್ದಲ್ಲಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 080-22483145, 080-22483140 ಅಥವಾ ಮೊಬೈಲ್ ನಂಬರ್ 9449588020 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ಪಾರದರ್ಶಕ ನೇಮಕಾತಿಗೆ ಕ್ರಮ : ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡುವುದು, ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಅವಕಾಶ ಕಲ್ಪಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಡುವುದು ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ […]

Continue Reading