ಶಿವಮೊಗ್ಗ | ಗೃಹಲಕ್ಷ್ಮೀ ಯೋಜನೆ ; 9,247 ಫಲಾನುಭವಿಗಳು ನಿಧನ, 5,618 ಅನರ್ಹರು : ಸಿ.ಎಸ್.ಚಂದ್ರಭೂಪಾಲ್

ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಸಭೆ ತಿಳಿಸಿದೆ. ಉಚಿತ ವಿದ್ಯುತ್ ದುರ್ಬಳಕೆ – ವಾಣಿಜ್ಯ ಬಳಕೆಗೆ ಬ್ರೇಕ್: ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್‌ಗಳಿರುವುದು ಪತ್ತೆಯಾಗಿದೆ. […]

Continue Reading

ದಾವಣಗೆರೆ | ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು

ಸುಶೀಲ್ ಕುಮಾರ್ ಅವರ ತಾಯಿ ದೇವಮ್ಮ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್​ನಲ್ಲಿ ಕೆಲಸ ಮಾಡುತ್ತಿದ್ದು, ಮುಂದೆ ನನಗೆ ಆಸರೆ ಯಾರು ಎಂದು ಗೋಳಾಡುತ್ತಿರುವುದು ಎಲ್ಲರನ್ನೂ ಭಾವುಕರನ್ನಾಗಿಸಿತು.

Continue Reading

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ

ಈ ಇಡೀ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, ಯಾವುದೇ DPR ಇಲ್ಲದೆಯೇ ಟೆಂಡರ್ ಕರೆದಿರುವ ಮೊದಲ ಯೋಜನೆ ಇದಾಗಿದ್ದು, ಇಲ್ಲಿ ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ದೂರಿದರು. ಹಾಗೆಯೇ, ಸಿದ್ದರಾಮಯ್ಯ ಅವರ ದಡ್ಡತನಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಬುದ್ಧಿವಂತಿಕೆಗೆ ಇಲ್ಲಿ ಅವಕಾಶ ನೀಡಬಾರದು.ಮುಖ್ಯಮಂತ್ರಿಗಳು ನೀಡಿರುವ ಈ ಮನವಿಯನ್ನು ಪ್ರಧಾನಿ ಮೋದಿ ಅವರು ಖಂಡಿತವಾಗಿ ತಿರಸ್ಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕೇಂದ್ರದ ಅನೇಕ ತಜ್ಞರು ಸಹ ನಮ್ಮ […]

Continue Reading

ಭದ್ರಾವತಿ | ಮನೆಯ ಕಾಂಪೌಂಡಿನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಟರು

ದುಷ್ಕರ್ಮಿಗಳ ಈ ಕೃತ್ಯದ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಭದ್ರಾವತಿ ನ್ಯೂಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ರಾಜ್ಯದಲ್ಲಿ‌ ಮುಂಗಾರು ಮಳೆ ಕುಂಠಿತ ಹೆಚ್ಚಿಸಿದ ಆತಂಕ

ಈ ಬಾರಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.

Continue Reading