ಹೊಸನಗರ | ಟ್ರಾಕ್ಟರ್- ಕಾರು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ

ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Continue Reading

ಹಾವೇರಿ | ಶಾಲೆ ಫೀಸ್ ಕಟ್ಟಿ ವಿದ್ಯೆ ಕಲಿಸಿದ ಗುರುವಿಗೆ ಹೊಸ ಕಾರನ್ನು ಉಡುಗೊರೆಯಾಗಿ ನೀಡಿ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿ

ಅವರು ನನಗೆ ಕೇವಲ ಶಿಕ್ಷಕರಲ್ಲ. ನಾನು ಸ್ನಾತಕೋತ್ತರ ಪದವಿ ಪೂರ್ಣಗೊಳಿಸುವವರೆಗೂ ತಂದೆಯಂತೆ ನನ್ನ ಜೊತೆ ನಿಂತಿದ್ದರು. ನನ್ನ ಜೀವನವನ್ನು ಬದಲಿಸಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಬೇಕೆಂಬ ಆಸೆ ಇತ್ತು. ಈ ಕಾರು ನನ್ನ ಜೀವಮಾನವಿಡೀ ಇರುವ ಗೌರವ ಮತ್ತು ಕೃತಜ್ಞತೆಯ ಒಂದು ಸಣ್ಣ ಸಂಕೇತ ಮಾತ್ರ ಎಂದು ನವೀನ್ ಹೇಳುತ್ತಾರೆ. ಹಾನಗಲ್ ಕುಮಾರೇಶ್ವರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಈ ಭಾವನಾತ್ಮಕ ಕ್ಷಣ ಅನಾವರಣಗೊಂಡಿತು. ಹೊಸ ಕಾರನ್ನು ವೇದಿಕೆಯ ಬಳಿ ತಂದು ಅದರ ಕೀಗಳನ್ನು […]

Continue Reading

ಶಿವಮೊಗ್ಗ | ಕಾರಾಗೃಹ ಸಜಾ ಬಂದಿಗಳಿಂದ ಸ್ವಚ್ಛತಾ ಜಾಗೃತಿ ಗೀತೆಗಳ ಧ್ವನಿಮುದ್ರಿಕೆ ಬಿಡುಗಡೆ

ಸಂಗೀತ ಮತ್ತು ಸಾಹಿತ್ಯವು ವ್ಯಕ್ತಿತ್ವ ಪರಿವರ್ತನೆಗೆ ಪರಿಣಾಮಕಾರಿ ಮಾಧ್ಯಮಗಳಾಗಿವೆ. ಬಂಧಿಗಳಲ್ಲಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಬಳಸುವ ಉದ್ದೇಶದಿಂದ ಈ ಸ್ವಚ್ಛತಾ ಜಾಗೃತಿ ಗೀತೆಗಳನ್ನು ಸಿದ್ಧಪಡಿಸಲಾಗಿದೆ. ನಗರದ ಜನರು ಈ ಹಾಡುಗಳ ಸಂದೇಶವನ್ನು ಅಳವಡಿಸಿಕೊಂಡು ಸ್ವಚ್ಛ ಶಿವಮೊಗ್ಗ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಹೇಳಿದರು.ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದಲ್ಲಿ ಜಾರಿಗೊಂಡಿರುವ ಈ ಯೋಜನೆ, ಕೇವಲ ಸ್ವಚ್ಛತಾ ಅಭಿಯಾನವಷ್ಟೇ ಅಲ್ಲದೆ, ಬಂಧಿಗಳ ಪುನರ್ವಸತಿ ಮತ್ತು ಸಮಾಜದೊಂದಿಗೆ ಅವರ ಸಕಾರಾತ್ಮಕ ಸಂಪರ್ಕವನ್ನು ಬೆಳೆಸುವ ಪ್ರಯತ್ನವೂ ಆಗಿದೆ. ಇಂದಿನಿಂದ ಕಸ […]

Continue Reading

ಶಿವಮೊಗ್ಗ | ಉದ್ಯಮ ಸ್ನೇಹಿ ಸುಧಾರಣೆಗಳ ಮೂಲಕ ದೇಶದ ಕೈಗಾರಿಕಾ ಪರಿಸರವನ್ನು ಬಲಪಡಿಸಿದೆ : ಸಂಸದ ಬಿ. ವೈ. ರಾಘವೇಂದ್ರ

ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು Ease of Doing Business, Make in India, Startup India, PM Vishwakarma, Production Linked Incentive (PLI) ಸೇರಿದಂತೆ ಹಲವು ಉದ್ಯಮ ಸ್ನೇಹಿ ಸುಧಾರಣೆಗಳ ಮೂಲಕ ದೇಶದ ಕೈಗಾರಿಕಾ ಪರಿಸರವನ್ನು ಬಲಪಡಿಸಿದೆ ಎಂದರು. ಈ ಪರಿವರ್ತನೆಯ ಫಲವಾಗಿ MSME ವಲಯವು ದೇಶದ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಶಿವಮೊಗ್ಗ ಮತ್ತು ಮಲೆನಾಡು ಭಾಗದ ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು […]

Continue Reading

ಬುರ್ಖಾ ಧರಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರು ಯುವಕರು ದೊಡ್ಡಪೇಟೆ ಪೊಲೀಸರ ವಶಕ್ಕೆ

ಘಟನೆಯ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಪೇಟೆ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.ಪೊಲೀಸರ ವಿಚಾರಣೆ ವೇಳೆ, ಸೆಂಟ್ರಲ್ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯೋರ್ವನ ಅಣತಿಯಂತೆ ಆತನ ಪತ್ನಿಗೆ ಬೆದರಿಕೆ ಹಾಕಲು ಬಂದಿರುವ ಮಾಹಿತಿ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

ಶಿವಮೊಗ್ಗ | ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ, ಜೀವ ಬೆದರಿಕೆ

ಈ ಭೀಕರ ದಾಳಿಗೆ ನಿಖರವಾದ ಕಾರಣ ಏನೆಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

Continue Reading

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಪರ್ಯಾಯ ಸಂಚಾರ ಮಾರ್ಗಗಳಾದ ತೀರ್ಥಹಳ್ಳಿ –ಉಡುಪಿ ಕಡೆಗೆ ಹೋಗುವ ವಾಹನಗಳು ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಮತ್ತು ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಸಂಚರಿಸುವುದು.ಉಡುಪಿ- ತೀರ್ಥಹಳ್ಳಿ ಕಡೆಗೆ ಹೋಗುವ ವಾಹನಗಳು ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮತ್ತು ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Continue Reading