ಸ್ಪಾಗಳ ಅನೈತಿಕ ಚಟುವಟಿಕೆಗೆ ಬ್ರೇಕ್ ; ಶೀಘ್ರದಲ್ಲಿ ಪ್ರತ್ಯೇಕ ಕಾನೂನು ಜಾರಿ

ಸ್ಪಾ ಕೇಂದ್ರಗಳಲ್ಲಿ ಲೈಂಗಿಕ ಚಟುವಟಿಕೆ ಸಂಪೂರ್ಣ ನಿಷೇಧವಾಗಿರಲಿದೆ. ಪುರುಷ ಮತ್ತು ಮಹಿಳೆಯರ ವಿಭಾಗಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಗ್ರಾಹಕರ ಗುರುತಿನ ಚೀಟಿ ದಾಖಲೆ ಕಡ್ಡಾಯವಾಗಿದ್ದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಕನಿಷ್ಠ 3 ತಿಂಗಳು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು. ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಮಾತ್ರ ಕಾರ್ಯಾಚರಿಸಬೇಕು. ಮಸಾಜ್ ಸೇವೆ ನೀಡುವ ಸಿಬ್ಬಂದಿ ಮಾನ್ಯತೆ ಪಡೆದ ಪ್ರಮಾಣಪತ್ರ ಅಥವಾ ಡಿಪ್ಲೊಮಾ ಹೊಂದಿರುವುದು ಕಡ್ಡಾಯವಾಗಲಿದೆ. ಮಾಲೀಕರು ಹಾಗೂ ಸಿಬ್ಬಂದಿಗೆ ಪೊಲೀಸ್‌ ಪರಿಶೀಲನೆ ಮತ್ತು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಅಗತ್ಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Continue Reading

ಶಿವಮೊಗ್ಗ | ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026”

ಅದೇ ದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಶಿವಮೊಗ್ಗದ ಮಹಾತ್ಮ ಗಾಂಧಿ ಪಾರ್ಕ್ ಎದುರಿಗಿರುವ ದೇಶೀಯ ವಿದ್ಯಾ ಸಂಸ್ಥೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ಬಿ.ಎಚ್. ನೆರವೇರಿಸುವರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ […]

Continue Reading

ಗೃಹ ಸಚಿವರ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ : ಸಂಸದ ಬಿ. ವೈ. ರಾಘವೇಂದ್ರ

ಆರ್‌ಎಸ್‌ಎಸ್ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ದೇಶದ ಜನರು ಮತ್ತು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಜಾಗತಿಕ ವಿಚಾರಧಾರೆಯಾಗಿದೆ. ಸಂಘದ ಇದೇ ದೇಶಭಕ್ತಿಯ ಪ್ರತಿಫಲದಿಂದಲೇ ಇಂದು ಭಾರತ ಜಗತ್ತಿನಾದ್ಯಂತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ಆದರೆ ಗೃಹ ಸಚಿವರಿಗೆ ಕನಿಷ್ಠ ರಾಜಕೀಯ ಸಂಯಮವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಅನ್ನು ಓಲೈಸಲು ಹಾಗೂ ಸಚಿವ ಸಂಪುಟದಲ್ಲಿ ತಮ್ಮ ಖುರ್ಚಿ ಮತ್ತು ಖಾತೆಯನ್ನು ಭದ್ರಪಡಿಸಿಕೊಳ್ಳಲು ಅವರು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ ಎಂದು ಲೇವಡಿ […]

Continue Reading

ಶಿವಮೊಗ್ಗ | ಡೊನೇಷನ್ ದಂಧೆ” ಹಾಗೂ “ಕಟ್ಟಡ ಶುಲ್ಕ”ದ ಹೆಸರಿನ ಸುಲಿಗೆ ತಡೆಗಟ್ಟಿ : HRJC ಮನವಿ

ಮನವಿ ಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ. ಸಿಬ್ಗತ್ ಉಲ್ಲಾ, ಸಂಘಟನೆಯ ಪ್ರಮುಖ ಪದಾಧಿಕಾರಿಗಳಾದ ಲೋಕೇಶ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಸಿಬ್ಗತ್ ಉಲ್ಲಾ ಅವರು, “ಪ್ರಸ್ತುತ ಖಾಸಗಿ ಶಾಲೆಗಳು ಸರ್ಕಾರದ ಯಾವುದೇ ನಿಯಮಾವಳಿಗಳಿಗೆ ಹಾಗೂ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಶಾಲಾ ಪ್ರವೇಶಾತಿ (Admission) ಸಂದರ್ಭದಲ್ಲಿ ಪೋಷಕರಿಂದ ಯಾವುದೇ ರಶೀದಿ ಇಲ್ಲದೆ ಲಕ್ಷಾಂತರ ರೂಪಾಯಿಗಳನ್ನು ‘ಡೊನೇಷನ್’ ರೂಪದಲ್ಲಿ ಕಡ್ಡಾಯವಾಗಿ ವಸೂಲಿ ಮಾಡಲಾಗುತ್ತಿದೆ. ಇದರೊಂದಿಗೆ […]

Continue Reading

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ಶಿವಮೊಗ್ಗ | ದೇಶದಲ್ಲೆಡೆ ಎಸ್‌ಐಆರ್ ಜಾಗೃತಿ ಮೂಡಿಸಲು ಕಾರ್ಯಾಗಾರ : ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

ಆದರೆ ಎಸ್‌ಐಆರ್ ಎನ್ನುವುದು ಮತದಾರರ ಪಟ್ಟಿ ಪರಿಷ್ಕರಣೆ ಮಾತ್ರವಲ್ಲ. ಇದು ಇಡೀ ಮತದಾರರ ಪಟ್ಟಿಯ ನವೀಕರಣ. ಹೊಸಪಟ್ಟಿಯ ರಚನೆಯಾಗಿದೆ. ಇದು ಈವರೆಗೆ ದೇಶದಲ್ಲಿ ನಡೆದಿಲ್ಲ. ಇದೇ ಮೊದಲ ಬಾರಿ ಇಂತಹ ಪುನರ್ನವೀಕರಣ ನಡೆಯುತ್ತಿದೆ ಎಂದರು.

Continue Reading

ದಾವಣಗೆರೆ | ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್ ; 10 ಜನರು ವಶಕ್ಕೆ

ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಇಸ್ತ್ರಿ ನಾಗರಾಜ್, ನಾಗರಾಜ್, ಅರ್ಜುನ್, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್, ಮಧು ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಮಹಿಳೆ ನೀಡಿದ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ದಾಖಲಿಸಲಾಗಿದೆ. ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿ ಎಚ್.ಟಿ. ಶೇಖ‌ರ್ ಬಸವಾಪಟ್ಟಣ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿತರು ಹಾಗೂ ಸಂತ್ರಸ್ತೆಯನ್ನು ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. […]

Continue Reading

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್ ಬಳಿ ಸಂಚಾರ ಬದಲಾವಣೆ

ಇದರಿಂದಾಗಿ ಈ ಭಾಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ದಟ್ಟವಾಗಿತ್ತು.ನೂತನ ಆದೇಶ:ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗೇಟ್ ಸಿಗ್ನಲ್‌ನಲ್ಲಿ ಆಲ್ಕೋಳ ಸರ್ಕಲ್ ಕಡೆಯಿಂದ ಹೆಲಿಪ್ಯಾಡ್ ಸರ್ಕಲ್ ಕಡೆಗೆ ಬರುವ ವಾಹನಗಳಿಗೆ ಎದುರಾಗಿ ಆಟೋ ಕಾಂಪ್ಲೆಕ್ಸ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ‘ನೋ ಎಂಟ್ರಿ’ ಆದೇಶ ಹೊರಡಿಸಲಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ […]

Continue Reading