ಹುಲಿಕಲ್ ಬಾಳೆಬರೆ ಘಾಟಿ ಮಣ್ಣು ಕುಸಿತ ದುರ್ಘಟನೆ ಸ್ಥಳಕ್ಕೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಂದ ಭೇಟಿ-ಪರಿಶೀಲನೆ

ಹಾಗೂ ಮೃತ ಕಾರ್ಮಿಕರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಈ ವೇಳೆ ಸಾಗರ ಉಪವಿಭಾಗದ ಎಸಿ ವೀರೇಶ್, ಹೊಸನಗರ ತಹಶೀಲ್ದಾರ್ ಭರತ್ ಕುಮಾರ್, ಪಿಡಬ್ಲುö್ಯಡಿ ಮುಖ್ಯ ಅಭಿಯಂತರರು, ಎಇಇ ಇತರೆ ಅಧಿಕಾರಿಗಳು ಹಾಜರಿದ್ದರು.

Continue Reading

ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಪ್ರಕರಣ ದಾಖಲು

ಮದುವೆಯ ಸಮಯದಲ್ಲಿ ಮೊನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದಳು ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಕೇರಳದ ದೇವಸ್ಥಾನವೊಂದರಲ್ಲಿ ನಡೆದ ಇವರ ಮದುವೆಯು ಮೊದಲಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.ಈ ಮೊದಲು ಈ ಮದುವೆಯನ್ನು ವಿರೋಧಿಸಿದ್ದ ನಿರ್ದೇಶಕರೊಬ್ಬರ ಮೇಲೆ ಮೊನಾಲಿಸಾ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಈಗ ಅಧಿಕೃತ ತನಿಖೆಯಿಂದ ಆಕೆ ‘ಮೈನರ್’ ಎಂಬುದು ಸಾಬೀತಾಗಿರುವುದು ಪ್ರಕರಣಕ್ಕೆ ಹೊಸ ತಿರುವು […]

Continue Reading

ದ್ವಿತೀಯ ಪಿಯು ಫಲಿತಾಂಶ ಸರ್ಕಾರದ ಅಧಿಕೃತ ವೆಬ್‌ಸೈಟ್‌ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ 600ಕ್ಕೆ 630, 680 ಅಂಕ

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಫಲಿತಾಂಶ ಪ್ರಕಟಿಸುವಾಗ ಅಧಿಕಾರಿಗಳ ಗಮನ ಎಲ್ಲಿತ್ತು ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ದೋಷವನ್ನು ಒಪ್ಪಿಕೊಂಡು, ತಾಂತ್ರಿಕ ಸಮಸ್ಯೆಯಿಂದ ವ್ಯತ್ಯಯ ಉಂಟಾಗಿದೆ ಎಂದು ಸ್ಪಷ್ಟಪಡಿಸಿದ್ದು, ತಪ್ಪಾಗಿ ಮುದ್ರಿತವಾಗಿರುವ ಅಂಕಪಟ್ಟಿಗಳಿಗೆ ಪರಿಷ್ಕೃತ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ. ಏಪ್ರಿಲ್ 9ರಂದು ಪ್ರಕಟವಾದ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ […]

Continue Reading

ಮಗಳೊಂದಿಗೆ ಅಮ್ಮನು ಪಿಯುಸಿ ಪಾಸ್..!

ಪತಿಯ ಪ್ರೋತ್ಸಾಹ, ಕಾಲೇಜಿನ ಉಪನ್ಯಾಸಕರ ಬೆಂಬಲದಿಂದ ತಾಯಿ, ಮಗಳು ಇಬ್ಬರೂ ಪರೀಕ್ಷೆಗೆ ಕುಳಿತರು. ಹಾಲ್ ಟಿಕೆಟ್​ ಬಂದಾಗ ಪರೀಕ್ಷಾ ಕೇಂದ್ರ ಮೊಂಟೆಪದವು ನೇತ್ರಾವತಿ ಅವರಿಗೆ ದೊರಕಿತು. ಸರ್ಕಾರಿ ಪದವಿಪೂರ್ವ ಕಾಲೇಜು ಮೊಂಟೆಪದವು ಮೂಲಕ ಪರೀಕ್ಷೆಗೆ ಹಾಜರಾಗಿದ್ದ ಇವರು ತನ್ನ ಪ್ರಥಮ ಪ್ರಯತ್ನದಲ್ಲೇ ಕಲಾ ವಿಭಾಗದಲ್ಲಿ ಉತ್ತೀರ್ಣರಾಗಿದ್ದು, 257 ಅಂಕಗಳನ್ನು ಪಡೆದಿರುತ್ತಾರೆ. ಮಗಳು ಹೇಮಶ್ರೀ ಆರ್​, ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 562 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಪ್ರಥಮ […]

Continue Reading

ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading

ಶಿವಮೊಗ್ಗ | ಕೇಂದ್ರ BJP ಸರ್ಕಾರದ ವಿರುದ್ಧ NSUI ಪ್ರತಿಭಟನೆ

ಕೇಂದ್ರ ಸರ್ಕಾರದ ಸ್ವಾಮ್ಯದ ಹಲವಾರು ಕೈಗಾರಿಕೆಗಳನ್ನು ಮುಚ್ಚುವ ಮೂಲಕ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿವಿಧ ನಿಗಮಗಳಲ್ಲಿ ಹೊರಗುತ್ತಿಗೆ ಪದ್ಧತಿಯನ್ನು ಜಾರಿ ಮಾಡುವ ಮೂಲಕ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆ ಇಲ್ಲದಂತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ‘ಭಾರತ ಅಭಿವೃದ್ಧಿ ಹೊಂದುತ್ತಿದೆ’ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ […]

Continue Reading

ಶಿವಮೊಗ್ಗ | ದ್ವಿತೀಯ ಪಿಯುಸಿ-ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ : ಜಿ. ಪಂ. ಸಿಇಒ ಹೇಮಂತ್. ಎನ್

ಫಲಿತಾಂಶ ವಿವರ : ಜಿಲ್ಲೆಯಲ್ಲಿ ಉನ್ನತ ಶ್ರೇಣಿ 4622, ಪ್ರಥಮ ದರ್ಜೆ 8308, ದ್ವಿತೀಯ ದರ್ಜೆ 1841 ಮತ್ತು 639 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ತಾಲ್ಲೂಕುವಾರು ತೀರ್ಥಹಳ್ಳಿ ತಾಲ್ಲೂಕು ಉನ್ನತಶ್ರೇಣಿ 381, ಪ್ರಥಮ ದರ್ಜೆ 519, ದ್ವಿತೀಯ ದರ್ಜೆ 121, ಪಾಸು 26, ಶೇ.93.73 ಫಲಿತಾಂಶದೊAದಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಹೊಸನಗರ ಉನ್ನತ ಶ್ರೇಣಿ 177, ಪ್ರಥಮ ದರ್ಜೆ 469, ದ್ವಿತೀಯ ದರ್ಜೆ 103, ಪಾಸು 22 ಶೇ.93 ದ್ವಿತೀಯ ಸ್ಥಾನ. ಶಿವಮೊಗ್ಗ ಉನ್ನತ ಶ್ರೇಣಿ 2541, […]

Continue Reading

ಶಿವಮೊಗ್ಗ | ಶಾಲಾ- ಕಾಲೇಜು ಡೊನೇಷನ್ ಹಾವಳಿ ತಪ್ಪಿಸಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಇದಲ್ಲದೆ ಪರವಾನಿಗೆ ಪಡೆಯದೆ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳ ಬಗ್ಗೆ ಕ್ರಮ ಕೈಗೊಳ್ಳಲು ಹಾಗೂ ಮೂಲಭೂತಸೌಲಭ್ಯ ಇಲ್ಲದೆ ಕೋಚಿಂಗ್ ಸೆಂಟರ್ ನಡೆಸುವವರಿಗೆ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ. ಡ್ರಾಪ್‌ಔಟ್: ಪಿಯುಸಿ ನಂತರ ಶಿಕ್ಷಣ ಮುಂದುವರೆಸದೆ ಮನೆಯಲ್ಲೇ ಉಳಿಯುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಶಿಕ್ಷಣದತ್ತ ಕರೆತರಲು ಪ್ರಯತ್ನಿಸಲಾಗುವುದು. ಹಾಸ್ಟೆಲ್ ಸೇರಿದಂತೆ ಕೆಲ ಸೌಲಭ್ಯಗಳಿಲ್ಲದೆ ಶಿಕ್ಷಣದಿಂದ ದೂರ ಉಳಿದವರಿಗೆ ಸರ್ಕಾರದಿಂದ ಆಗುವ ಅಗತ್ಯ ಅನುಕೂಲ ಮಾಡಿಕೊಟ್ಟು ಶಿಕ್ಷಣದಲ್ಲಿ ಮುಂದುವರೆಯುವಂತೆ ನೋಡಿಕೊಳ್ಳಲು ವಿಶೇಷ ಗಮನ ಹರಿಸುವುದಾಗಿ ಹೇಮಂತ್ ತಿಳಿಸಿದರು. ಫಲಿತಾಂಶ ಹೆಚ್ಚಳಕ್ಕೆ […]

Continue Reading

ಶಿವಮೊಗ್ಗ | ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಂಜಲಿಗೆ ಶುಭ ಹಾರೈಕೆ

ನಮ್ಮೊಂದಿಗೆ ಮಾತನಾಡಿದ ಅಂಜಲಿ “ನಾನು ದಿನನಿತ್ಯದ ಪಾಠಗಳನ್ನು ಅದೇ ದಿನ ಓದಿ ಮುಗಿಸುವ ಅಭ್ಯಾಸ ಮಾಡಿಕೊಂಡಿದ್ದೆ. ಶ್ರದ್ಧೆಯಿಂದ ಓದಿದ್ದೇನೆ ಹಾಗಾಗಿ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದು ಅಂಜಲಿ ಹೇಳಿದ್ದಾರೆ. ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ ತಂದೆ ಚಿದಂಬರ ಹಾಗೂ ತಾಯಿ ವಂದನಾ ಅವರು , “ತುಂಬಾ ಸಂತೋಷವಾಗಿದೆ. ಅವಳು ಬಹಳ ಶ್ರಮ ಪಟ್ಟಿದ್ದಾಳೆ. ಅವಳ ಮುಂದಿನ ಶೈಕ್ಷಣಿಕ ಜೀವನಕ್ಕೆ ನಾವು ಸಂಪೂರ್ಣ ಪ್ರೋತ್ಸಾಹ ನೀಡುತ್ತಿದ್ದೇವೆ.ಎಂದಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆಯಾದ ಅಂಜಲಿಗೆ […]

Continue Reading