ಶಿವಮೊಗ್ಗ | ವಿಮಾನ ನಿಲ್ದಾಣದಲ್ಲಿ ಕರಡಿ ಪ್ರತ್ಯಕ್ಷ
ಇದೇ ವೇಳೆ ವಿಮಾನ ನಿಲ್ದಾಣದ ಕಾಂಪೌಂಡ್ ಒಳಗೆ ಹಾರಿದೆ. ವಿಮಾನ ನಿಲ್ದಾಣದ ಕಾಂಪೌಂಡ್ ಒಳಗೆ ಪೊದೆ ಬೆಳೆದಿದ್ದು ಕರಡಿ ಅವಿತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ವಿಮಾನ ನಿಲ್ದಾಣದ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಗಿದ್ದು, ಉಂಬ್ಳೆಬೈಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಕರಡಿಯನ್ನು ಸೆರೆ ಹಿಡಿಯಲಾಗಿದ್ದು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
Continue Reading

