ಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ : ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ

ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ಈ ಘಟನೆಯು ಜಾಗತಿಕ ಗಾಳಿಯ ಮಾದರಿ ಹಾಗೂ ಮಳೆಯ ಪ್ರಮಾಣವನ್ನು ಏರುಪೇರು ಮಾಡುತ್ತದೆ. ಕಳೆದ 150 ವರ್ಷಗಳಲ್ಲೇ ಅತ್ಯಂತ ಪ್ರಬಲ ಎಲ್ ನಿನೋ ಆವರಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಕ್ಷೀಣಿಸಿ […]

Continue Reading

ಸ್ಪಾಗಳ ಅನೈತಿಕ ಚಟುವಟಿಕೆಗೆ ಬ್ರೇಕ್ ; ಶೀಘ್ರದಲ್ಲಿ ಪ್ರತ್ಯೇಕ ಕಾನೂನು ಜಾರಿ

ಸ್ಪಾ ಕೇಂದ್ರಗಳಲ್ಲಿ ಲೈಂಗಿಕ ಚಟುವಟಿಕೆ ಸಂಪೂರ್ಣ ನಿಷೇಧವಾಗಿರಲಿದೆ. ಪುರುಷ ಮತ್ತು ಮಹಿಳೆಯರ ವಿಭಾಗಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಗ್ರಾಹಕರ ಗುರುತಿನ ಚೀಟಿ ದಾಖಲೆ ಕಡ್ಡಾಯವಾಗಿದ್ದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಕನಿಷ್ಠ 3 ತಿಂಗಳು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು. ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಮಾತ್ರ ಕಾರ್ಯಾಚರಿಸಬೇಕು. ಮಸಾಜ್ ಸೇವೆ ನೀಡುವ ಸಿಬ್ಬಂದಿ ಮಾನ್ಯತೆ ಪಡೆದ ಪ್ರಮಾಣಪತ್ರ ಅಥವಾ ಡಿಪ್ಲೊಮಾ ಹೊಂದಿರುವುದು ಕಡ್ಡಾಯವಾಗಲಿದೆ. ಮಾಲೀಕರು ಹಾಗೂ ಸಿಬ್ಬಂದಿಗೆ ಪೊಲೀಸ್‌ ಪರಿಶೀಲನೆ ಮತ್ತು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಅಗತ್ಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Continue Reading