ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ ! ಗಣ್ಯರ ಸಂತಾಪ

ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ […]

Continue Reading

ಶಿವಮೊಗ್ಗ | ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು : ಎಸ್ಪಿಗೆ ಜಿಲ್ಲಾ ಬಿಜೆಪಿ ಮನವಿ

ಪೋಲೀಸ್ ಇಲಾಖೆಯ ವಾಹನದ ಮೇಲೇರಿ ಕಾಂಗ್ರೆಸ್ ಬಾವುಟವನ್ನು ಹಿಡಿದು ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ ಎಂಬುದರ ಮೂಲಕ ಭಯದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಮತ್ತು ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ,ನಗರ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿರುವ ಈ ಘಟನೆಯ ಸಂಪೂರ್ಣ ದೃಶ್ಯವನ್ನು ತಮ್ಮದೇ ಇಲಾಖೆಯ ಡೋನ್ ಕ್ಯಾಮರದಲ್ಲಿ ಸೆರೆಯಾಗಿದೆ. ಇದನ್ನು ವೀಕ್ಷಿಸಿ ಕ್ರಮ ಜರುಗಿಸುವಂತೆ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಚೇರಿ ನುಗ್ಗಲು ಬಿಜೆಪಿ ಯತ್ನ : ಕಾರ್ಯಕರ್ತರು ಪೊಲೀಸರ ವಶಕ್ಕೆ..!

ಇಷ್ಟಕ್ಕೆ ಮುಗಿಯಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಬಿಜೆಪಿ ಕಾರ್ಯಕರ್ತರು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಅಷ್ಟೇ ಅಲ್ಲದೆ ಪ್ರತಿಭಟನೆ ವಿಚಾರವಾಗಿ ಎಸ್‌ಪಿ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದರು. ಮನವಿ ಸಲ್ಲಿಸಿದ ನಂತರ, ಬೆಳಿಗ್ಗೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಮುತ್ತಿಗೆಗೆ ಕೌಂಟರ್ ಕೊಡಲು ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್. ಜಗದೀಶ್ ನೇತೃತ್ವದಲ್ಲಿ ಸಿದ್ಧರಾದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕಚೇರಿಯ ಎದುರಿದ್ದ ಬ್ಯಾನರ್‌ಗಳನ್ನು ಹರಿದ ಕಾರ್ಯಕರ್ತರು ನೇರವಾಗಿ ಕಾಂಗ್ರೆಸ್ ಕಚೇರಿಯ ಮೇಲೆ ಮೊಟ್ಟೆಯನ್ನು ತೂರಿದರು. ಆದರೆ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ […]

Continue Reading

ಶಿವಮೊಗ್ಗ | ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ : ಪೊಲೀಸ್ ವಾಹನ ಮೇಲೆಯೇ ಹತ್ತಿ ನಿಂತು ಕೈ ಮುಖಂಡನ ಆಕ್ರೋಶ

ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಜೀಪ್ ಮೇಲೇರಿದ್ದ ಕಾರ್ಯಕರ್ತನನ್ನು ಕೆಳಗಿಳಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರಂಪಾಟ ನಡೆಸಿದ ಪ್ರಮುಖ ಕಾರ್ಯಕರ್ತರನ್ನು ಖಾಕಿ ಪಡೆ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದೆ. ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದ ಬಿಜೆಪಿ ಕಚೇರಿಯ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಮುಂದುವರಿದಿದೆ.

Continue Reading

ಪ್ರಧಾನ್ ರಾಜಿನಾಮೆ ಕೊಡಬೇಕು, ಪ್ರಧಾನಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು : ರಾಹುಲ್ ಗಾಂಧಿ..!

ರಾಹುಲ್ ಗಾಂಧಿ ಮೂರು ಷರತ್ತು : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.* ವಿದ್ಯಾರ್ಥಿಗಳ ವಿರುದ್ಧ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಧಾನಿ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು.ಧರ್ಮೇಂದ್ರ ಪ್ರಧಾನ್ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. 40 ಲಕ್ಷ ರೂಪಾಯಿ ಹೊಂದಿರುವ ಯಾರಾದರೂ ಸರ್ಕಾರಿ ಉದ್ಯೋಗ ಪಡೆಯಬಹುದು. ಇಂದು ಭಾರತದಲ್ಲಿ ಶಿಕ್ಷಣವು ತುಂಬಾ ದುಬಾರಿಯಾಗಿದ್ದು, ಮಧ್ಯಮ ವರ್ಗದವರು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಸರ್ಕಾರಿ ಉದ್ಯೋಗಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ […]

Continue Reading

ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆಯನ್ನು ಸರ್ಕಾರವೇ ಭರಿಸಬೇಕಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಆರ್ಥಿಕ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಈ ಕಚೇರಿಗಳು ನಗರದ ವಿವಿಧೆಡೆ ಹರಿದು ಹಂಚಿಹೋಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಒಂದೇ ದಿನದಲ್ಲಿ ವಿವಿಧ ಇಲಾಖೆಗಳ ಕೆಲಸಗಳನ್ನು ಮುಗಿಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ನೂತನ ಆಡಳಿತ ಸೌಧ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಜಾಗವು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿದೆ. ಇದು ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ತಲುಪಲು ಯೋಗ್ಯವಾದ […]

Continue Reading

ಬಿಜೆಪಿ ಮೈತ್ರಿ ಬಿಟ್ಟು ಹೊರಗೆ ಬನ್ರಿ ನೋಡೋಣ? : ಕೇಂದ್ರ ಸಚಿವ ಎಚ್‌ಡಿಕೆಗೆ, ಮಾಜಿ ಸಚಿವ ಚಲುವರಾಯಸ್ವಾಮಿ ಪಂಥಾಹ್ವಾನ..!?

ತಮಿಳುನಾಡು ಮಾಜಿ ಸಿಎಂ ದಿವಂಗತ ಕರುಣಾನಿಧಿ ಮಗನನ್ನು ನೋಡಿ ಕಲಿತುಕೊಳ್ಳಿ. ದೇವೇಗೌಡರ ಮಗನಾಗಿ ಏನ್ರಿ ನಿಮ್ಮ ಸಾಧನೆ? ಇನ್ನು ಮುಂದೆಯಾದರೂ ಗೌರವದಿಂದ ಮಾತನಾಡಿ ಮಿಸ್ಟರ್ ಕುಮಾರಸ್ವಾಮಿಯವರೇ. ನಮಗೆ ಕುಮಾರಸ್ವಾಮಿ ಅಭಿನಂದನೆ ಬೇಕಾಗಿಲ್ಲ, ಅವರ ಸರ್ಟಿಫಿಕೇಟ್ ಬೇಕಾಗಿಲ್ಲ. ರೇವಣ್ಣಗೆ ಇರುವ ಮನಸ್ಸೂ ನಿಮಗೆ ಇಲ್ಲ ಎಂದು ಕಿಡಿಕಾರಿದರು.

Continue Reading

ಬೆಂಗಳೂರು ಬಳಿ ಎರಡನೆ ವಿಮಾನ‌ ನಿಲ್ದಾಣ ಬೇಡ : ಸಿಎಂಗೆ ವಿಜಯೇಂದ್ರ ಪತ್ರ..!

ಎರಡನೆಯದಾಗಿ, ಬೆಂಗಳೂರು ಈಗಾಗಲೇ ಜನಸಂಖ್ಯೆ, ವಾಹನ ದಟ್ಟಣೆ. ಕುಡಿಯುವ ನೀರು. ಸಂಚಾರ ಮತ್ತು ಪರಿಸರದ ಮೇಲೆ ಅತಿಯಾದ ಒತ್ತಡವನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಬೃಹತ್ ಮೂಲ ಸೌಕರ್ಯ ಯೋಜನೆಯನ್ನು ಬೆಂಗಳೂರಿನ ಸುತ್ತಮುತ್ತಲೇ ಕೇಂದ್ರೀಕರಿಸುವುದು ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುವ ಇರಾದೆ ಎಂದಿದ್ದಾರೆ.

Continue Reading

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ : ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಲಹೆ

ಹಾಸನ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳ ಬಗ್ಗೆ ದೇವೇಗೌಡರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಪುತ್ರ ವ್ಯಾಮೋಹ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನಹರಿಸಬೇಕು, ಕುಮಾರಸ್ವಾಮಿ, ಮತ್ತು ನಿಖಿಲ್ ಅವರನ್ನು ಮೆಚ್ಚಿಸಲು ಧರಣಿ ಕೂರಬೇಡಿ ಎಂದು ಸಲಹೆ ನೀಡಿದರು.

Continue Reading

ಶಿವಮೊಗ್ಗ | ಹತ್ತು ವರ್ಷಗಳ ಬಳಿಕವೂ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿ ಜಾರಿಗೆ ಬರದೆ ಮೂಲೆಗುಂಪಾಗಿರುವುದು ಸರ್ಕಾರದ ನಿರ್ಲಕ್ಷ್ಯ : ರಘು ಕೌಟಿಲ್ಯ…!

2014ರಲ್ಲಿ ಕಾಂತರಾಜ ಆಯೋಗಕ್ಕೆ ಜಾತಿ ಜನಗಣತಿಯ ಜವಾಬ್ದಾರಿ ನೀಡಲಾಯಿತು. ನಂತರ ಈ ಜವಾಬ್ದಾರಿಯನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗಕ್ಕೆ ವಹಿಸಲಾಯಿತು. ಆದರೆ ಸುಮಾರು ಹತ್ತು ವರ್ಷಗಳ ಬಳಿಕವೂ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿ ಜಾರಿಗೆ ಬರದೆ ಮೂಲೆಗುಂಪಾಗಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹೇಳಿದರು. ಬಿಹಾರ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಒಂದು ವರ್ಷದೊಳಗೆ ಜಾತಿ ಸಮೀಕ್ಷೆ ಪೂರ್ಣಗೊಂಡಿದ್ದರೆ, ಕರ್ನಾಟಕದಲ್ಲಿ ದಶಕ ಕಳೆದರೂ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು ಸರ್ಕಾರದ ಇಚ್ಛಾಶಕ್ತಿಯ ಕೊರತೆಯಾಗಿದೆ ಎಂದು ಆರೋಪಿಸಿದರು. 2025ರ ಜೂನ್ 15ರಂದು […]

Continue Reading