ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಒಂದೇ ರೀತಿಯ ಸಮಸ್ಯೆಗಳು ಪ್ರತಿ ಸೆಮಿಸ್ಟರ್‌ನಲ್ಲೂ ಮರುಕಳಿಸುತ್ತಿರುವುದರಿಂದ ವಿದ್ಯಾರ್ಥಿಗಳಲ್ಲಿ ವಿಶ್ವವಿದ್ಯಾಲಯದ ಫಲಿತಾಂಶ ವ್ಯವಸ್ಥೆಯ ಕುರಿತು ಅಸಮಾಧಾನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು, ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸುವುದು, ಅಂಕಗಳ ಹಾಗೂ ಫಲಿತಾಂಶದಲ್ಲಿನ ದೋಷಗಳನ್ನು ತ್ವರಿತವಾಗಿ ಸರಿಪಡಿಸುವುದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಸರಿಯಾದ ಫಲಿತಾಂಶ ನೀಡುವುದು ಹಾಗೂ ಮರುಮೌಲ್ಯಮಾಪನದ ಫಲಿತಾಂಶಗಳನ್ನು ನಿಗದಿತ ಅವಧಿಯಲ್ಲಿ ಪ್ರಕಟಿಸುವ ಮೂಲಕ ಫಲಿತಾಂಶ ಪ್ರಕಟಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಖಾತರಿಪಡಿಸುವಂತೆ ಎನ್‌ಎಸ್‌ಯುಐ ಶಿವಮೊಗ್ಗ ವಿಶ್ವವಿದ್ಯಾಲಯ […]

Continue Reading

ಶಿವಮೊಗ್ಗ | ಎನ್.ಎಸ್.ಯು.ಐ ನಿಂದ ಬೃಹತ್ ಪ್ರತಿಭಟನೆ ; ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ

ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು […]

Continue Reading

ಐಜಿಪಿ ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಘೋಷಣೆ

ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6, 2026 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಗುವುದು.

Continue Reading

ಕುವೆಂಪು ವಿ.ವಿ ಹಗರಣ ; ತನಿಖೆಗೆ ಸಮಿತಿ

ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್‌ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ 75 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್‌ಕ್ಲಾಸ್‌’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ 12.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. […]

Continue Reading