ಬೆಂಗಳೂರು | ಫಾರಂ ನಂ-7 ದುರ್ಬಳಕೆ ಆರೋಪ : ಚುನಾವಣಾಧಿಕಾರಿ ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ

ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿರುವುದು ವಿಚಾರಣೆಯಲ್ಲಿ ದೃಢಪಟ್ಟರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವಂತೆ Form-7 ಅರ್ಜಿ ಬಂದ ತಕ್ಷಣ ಹೆಸರು ಡಿಲೀಟ್ ಮಾಡುವುದಿಲ್ಲ. ಮೊದಲು ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡಲಾಗುತ್ತದೆ. ಬಳಿಕ ವಿಚಾರಣೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ ಸಲ್ಲಿಕೆಯಾಗಿರುವ Form-7 ಅರ್ಜಿಗಳ ಆಧಾರದಲ್ಲಿ ಯಾರ ಹೆಸರನ್ನೂ ನೇರವಾಗಿ ಮತದಾರರ ಪಟ್ಟಿಯಿಂದ […]

Continue Reading