6,400 ಕೋಟಿ ರೂ. ವೆಚ್ಚದ ಶಿವಮೊಗ್ಗ – ತುಮಕೂರು ಚತುಷ್ಪಥ ಹೆದ್ದಾರಿ ಯೋಜನೆ ಮುಂದಿನ ಮಾರ್ಚ್ ವೇಳೆಗೆ ಪೂರ್ಣ ; ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಈ ಬೃಹತ್ ಯೋಜನೆಗೆ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 1,268.33 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ, ಅರಣ್ಯ ಇಲಾಖೆ ತೆರವು ಹಾಗೂ ರೈಲ್ವೆ ಮೇಲ್ಸೇತುವೆಗಳ (ROB/RUB) ಅನುಮತಿ ಸೇರಿದಂತೆ ಎದುರಾಗಿದ್ದ ತಾಂತ್ರಿಕ ತೊಡಕುಗಳನ್ನು ‘ಭೂಮಿ ರಾಶಿ’ ಹಾಗೂ ‘ಪರಿವೇಶ’ ಪೋರ್ಟಲ್ ಮೂಲಕ ಬಗೆಹರಿಸಲಾಗುತ್ತಿದೆ. ಈ ಬೃಹತ್ ಹೆದ್ದಾರಿ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ – ಬೆಂಗಳೂರು ನಡುವಿನ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಸಾಗಾಣಿಕೆ ಹಾಗೂ […]

Continue Reading

ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading

ಶಿವಮೊಗ್ಗ ಮೂಲದ ಉದ್ಯಮಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣು

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿಗೆ ಪರಿಶೀಲನೆ ವೇಳೆ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ಆನಂದ್ ಸುಬ್ಬರಾವ್​ ತಮ್ಮ ಸಾವಿಗೆ ಮಾನಸಿಕ ಖಿನ್ನತೆ ಮತ್ತು ವೈಯಕ್ತಿಕ ಕಾರಣಗಳೇ ಹೊರತು ಬೇರಾರೂ ಕಾರಣರಲ್ಲ ಎಂದು ಉಲ್ಲೇಖಿಸಿದ್ದಾರೆ. ಹೋಟೆಲ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದ್ದು, ಘಟನೆಯಲ್ಲಿ ಯಾವುದೇ ಅನುಮಾನಾಸ್ಪದ ಸನ್ನಿವೇಶಗಳು ಕಂಡುಬಂದಿಲ್ಲ. ಆನಂದ್ ಸುಬ್ಬರಾವ್​ರನ್ನ ಯಾರೂ ತಳ್ಳಿಲ್ಲ ಮತ್ತು ಅವರು ತಾವಾಗಿಯೇ ಜಿಗಿದಿರುವುದು ದೃಢಪಟ್ಟಿದೆ. ಗುರುವಾರ ಮಧ್ಯಾಹ್ನ ಗುರುಗ್ರಾಮದಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಆನಂದ್ ಸುಬ್ಬರಾವ್ ಅವರ […]

Continue Reading

ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading

“ ನಾನು ಭ್ರಷ್ಟನಲ್ಲ” : ಅರವಿಂದ್ ಕೇಜ್ರಿವಾಲ್ ಕಣ್ಣೀರಿನಲ್ಲಿ ಹೇಳಿಕೆ

ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಚು ಆರೋಪ ಮಾಡಿದರು. “ಆಮ್ ಆದ್ಮಿ ಪಕ್ಷದ ಐವರು ಪ್ರಮುಖ ನಾಯಕರನ್ನು ಬಂಧಿಸಲಾಯಿತು. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನೇ ಬಂಧಿಸಲಾಯಿತು. ಆದರೆ ನಾನು ಸಂಪಾದಿಸಿರುವುದು ಪ್ರಾಮಾಣಿಕತೆ ಮಾತ್ರ,” ಎಂದು ಭಾವುಕರಾಗಿ ನುಡಿದರು. ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ರವರು ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಇನ್ನೂ 21 ಮಂದಿಗೆ ವಿನಾಯಿತಿ ನೀಡಿದರು. ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಮತ್ತು ಹಲವು ದೋಷಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

Continue Reading

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ ; ರಾಜ್ಯ ಸರ್ಕಾರಕ್ಕೆ ಘಟನೆ ವರದಿ ಸಲ್ಲಿಸಲು 5 ದಿನದ ಗಡುವು ನೀಡಿದ ಆಯೋಗ

ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ತಕ್ಷಣವೇ ಎಫ್‌ಐಆ‌ರ್ ದಾಖಲಿಸಿ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಈ […]

Continue Reading

ಪ್ರಿಯಾಂಕ ಗಾಂಧಿಯನ್ನು ‘ಪ್ರಧಾನಿ’ಯಾಗಿ ಮಾಡೇ ಮಾಡ್ತೀವಿ : ಸಂಸದ ಇಮ್ರಾನ್ ಮಸೂದ್

ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಹತ್ಯೆಯ ನಂತರ ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಗಮನ ಹರಿಸಬೇಕೆಂದು ಕೇಂದ್ರವನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಇತ್ತೀಚಿಗೆ ಒತ್ತಾಯಿಸಿದ್ದರು. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಕ್ರೂರ ಹತ್ಯೆಯನ್ನು ಖಂಡಿಸಿದ್ದರು.

Continue Reading