ಶಿವಮೊಗ್ಗ | ಮೃಗಲಾಯದಲ್ಲಿ ನೀರಾನೆ ಹಠಾತ್ ದಾಳಿ ; ಪಶು ವೈದ್ಯೆ ಸಾವು : ತನಿಖೆಗೆ ಅದೇಶಿಸಿದ ಸಚಿವರು

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. […]

Continue Reading