ಭಾರತದ ತೂಗುಸೇತುವೆಗಳ ಸರದಾರ ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಡಾ. ಗಿರೀಶ್ ಭಾರದ್ವಜ್ ಇನ್ನಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ಬಹುದೊಡ್ಡ ಕಂಪನಿಗಳ ಆಕರ್ಷಕ ಉದ್ಯೋಗದ ಆಫರ್‌ಗಳನ್ನು ಬದಿಗೊತ್ತಿ ಗೆ ಜನರ ಸಬಲೀಕರಣಕ್ಕೆ ಶ್ರಮಿಸಿದರು. ಸರ್ಕಾರಿ ವ್ಯವಸ್ಥೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕೈಚೆಲ್ಲುವ ಜಾಗದಲ್ಲಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಲಭವಾಗಿ ನಿರ್ಮಿಸಬಹುದಾದ ಪರಿಸರಸ್ನೇಹಿ ತೂಗುಸೇತುವೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿನ್ಯಾಸಗೊಳಿಸಿ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿದ್ದರು. ಬ್ರಿಡ್ಜ್ ಮ್ಯಾನ್ ಎಂದೇ ಖ್ಯಾತಿ: ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಗಿರೀಶ್ ಅವರು ಸುಳ್ಯದಲ್ಲೇ ತಂದೆಯವರ ಜೊತೆಗೂಡಿ ಸಣ್ಣದೊಂದು ವರ್ಕ್‌ಶಾಪ್ ಆರಂಭಿಸಿದರು. […]
Continue Reading
