ಚಿಕ್ಕಮಗಳೂರು | ಪತ್ನಿಯ ಶೀಲ ಶಂಕಿಸಿ ಪತಿಯಿಂದ ಪತ್ನಿ ಹತ್ಯೆ

ಹೊಸದುರ್ಗ ಮೂಲದ ರಂಗನಾಥ್ (36) ಬಿರೂರಿನಲ್ಲಿ ಪತ್ನಿ ಜೊತೆ ವಾಸವಿದ್ದ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಪತ್ನಿ ಮಮತಾ (33)ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಬಿಎಂಡಬ್ಲ್ಯು ಕಾರಿಗೆ ಮಹಿಳೆ ಅರ್ಚಕನ ಪತ್ನಿ ಬಲಿ!

ತೀರ್ಥಹಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಿಂತಿದ್ದ ಕಾರಿನಲ್ಲಿದ್ದ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಮಲ್ಲಿಕಾ ಜೋಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅರ್ಚಕ ಅಶೋಕ್ ಜೋಗಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ; ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಮಂದಿ ಪೊಲೀಸ್ ವಶಕ್ಕೆ

ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್, ವಸಂತ್‌ ನಾಯ್ಕ ಮತ್ತು ಕುಮಾರ್ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್‌ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ಉತ್ತರ ಕನ್ನಡ […]

Continue Reading

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ […]

Continue Reading

ಪ್ರೀತಿಸಿದ ಹುಡುಗನ ಜೊತೆ ವಿವಾಹಕ್ಕೆ ಒಪ್ಪದ ಪಾಲಕರಿಗೆ ನಿದ್ದೆ ಇಂಜೆಕ್ಷನ್ ಕೊಟ್ಟು ಕೊಂದ ಮಗಳು

ಈ ವಿರೋಧದಿಂದ ಕೋಪಗೊಂಡ ಸುರೇಖಾ, ತನ್ನ ನರ್ಸಿಂಗ್‌ ಕೌಶಲ ಬಳಸಿ ಸಂಶಯವಿಲ್ಲದೆ ಪೋಷಕರನ್ನು ಕೊಲ್ಲುವ ಸಂಚು ರೂಪಿಸಿದ್ದಾಳೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಜನವರಿ 24ರ ರಾತ್ರಿ, ನೋವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ‘ಆರ್ಟಾಸಿಲ್ (Artacil)’ ಎಂಬ ನಿದ್ರಾಜನಕ ಔಷಧವನ್ನು ಅಧಿಕ ಪ್ರಮಾಣದಲ್ಲಿ ಇಂಜೆಕ್ಟ್ ಮಾಡಿ ಪೋಷಕರ ಜೀವ ಹರಣ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಘಟನೆ ಸಂಬಂಧ ಪೊಲೀಸರು ಸುರೇಖಾವನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಉಡುಪಿ | ಪ್ರವಾಸಿ ಬೋಟ್ ಮಗುಚಿ ಇಬ್ಬರು ಪ್ರವಾಸಿಗರು ದುರ್ಮರಣ

ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಎಲ್ಲರನ್ನು ಸಮುದ್ರದಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬೋಟ್‌ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Continue Reading

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ; 400 ಕೋಟಿ ದರೋಡೆ

ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

Continue Reading

ಬೆಂಗಳೂರು | ಪ್ರಸಿದ್ಧ ಸ್ವಾಮೀಜಿಗೆ 1 ಕೋಟಿ ನೀಡುವಂತೆ BlackMail ; ಚಿಕ್ಕಮಗಳೂರಿನ ಲೇಡಿ ಸಿಸಿಬಿಗೆ ಬಲೆಗೆ

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಈಕೆ ಕಳೆದ 4 ರಿಂದ 5 ತಿಂಗಳ ಹಿಂದೆ ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದಾಳೆ. ಆನಂತರ ಬ್ಲಾಕ್​ಮೇಲ್ ಮಾಡಲು ಆರಂಭಿಸಿದ್ದಾಳೆ. ಭಯಬಿದ್ದ ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಆರೋಪಿಗೆ 4.5 ಲಕ್ಷ ರೂಪಾಯಿ ಹಣ ನೀಡಿದ್ದರು. ಹೀಗಿದ್ದರೂ ಇನ್ನೂ ಒಂದು ಕೋಟಿ ಕೊಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದರಿಂದ ಬೇಸತ್ತ ಸ್ವಾಮೀಜಿ ಪೊಲೀಸರ ಮೊರೆಹೋಗಿದ್ದರ. ಈ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Continue Reading