ಶಿವಮೊಗ್ಗ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಲು ಒತ್ತಾಯಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿಯವರು ಘೋರ ದುರಂತ ನಡೆದಿದ್ದರೂ ಆ ಬಗ್ಗೆ ಇದುವರೆಗೂ ಚಕಾರವೆತ್ತಲಿಲ್ಲ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಮೂಲಕ ಸೂತಕದ ವಾತಾವರಣದಲ್ಲೂ ಸಂಭ್ರಮಿಸಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲಾಗದೇ ಮರುಪರೀಕ್ಷೆ ನೆಡೆಸಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು.ದೇಶದಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯಗಳಿಗೆ […]

Continue Reading

ಶಿವಮೊಗ್ಗ | ಎಸ್ ಟಿ ಸಮುದಾಯದ ಅನುದಾನ ದುರ್ಬಳಕೆ ; ಜಿಲ್ಲಾ ಜೆಡಿಎಸ್ ಪ್ರತಿಭಟನೆ

ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ಹೆಚ್.ಆರ್.ಹನುಮಂತಪ್ಪ ಮಾತನಾಡಿ, ಪರಿಶಿಷ್ಟ ಪಂಗಡದ ಪೌಷ್ಟಿಕ ಆಹಾರ ಯೋಜನೆಯ 120 ಕೋಟಿ ರೂ. ಟೆಂಡರ್‌ನಲ್ಲಿ ಬಹುಕೋಟಿ ದುರ್ಬಳಕೆಯಾಗಿದ್ದು, ಬಡವರ ಅನ್ನಕ್ಕೆ ಕೈಹಾಕಿದ ಈ ಹಗರಣದ ತನಿಖೆ ಆಗಬೇಕಿದೆ. ಕಳೆದ ೨ ವರ್ಷಗಳಿಂದ ಶೇ. 90 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ, 2024-25 ನೇ ಸಾಲಿನಲ್ಲಿ ಶೇ. 80 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಸಂಪೂರ್ಣ ನಿಲ್ಲಿಸಲಾಗಿದೆ ಎಂದು ದೂರಿದರು. ಪರಿಶಿಷ್ಟ […]

Continue Reading

ಹೊಳೆಹೊನ್ನೂರು | ಹಳೆ ಸರ್ಕಾರಿ ಶಾಲಾ ಕಟ್ಟಡ ತೆರವು ಮಾಡದಂತೆ ಗ್ರಾಮಸ್ಥರ ಆಕ್ರೋಶ

ನ್ಯಾಯಲಯದ ಆದೇಶವಿದೆ ಎಂದು ನಕಲಿ ದಾಖಲೆಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಶಾಲೆಯನ್ನು ನೆಲ ಸಮ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದರು. ಸುಸ್ಥಿತಿಯಲ್ಲಿದ ಹಳೆ ಶಾಲಾ ಕಟ್ಟಡವನ್ನು ಜೆಸಿಬಿ ಯಂತ್ರ ಬಳಸಿ ಬೀಳಿಸಲಾಗಿದೆ. ಶಾಲೆಯ ಬಾಗಿಲು ಕಿಟಕಿ ಸೇರಿದಂತೆ ಮೇಲ್ಚಾವಣಿಯ ಕಬ್ಬಿಣವನ್ನು ಕಿತ್ತು ಮಾರಾಟ ಮಾಡಿದ್ದಾರೆ. ಶಾಲಾ ಕಟ್ಟಡಕ್ಕೆ ಅಳವಡಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣ ತೆಗೆದುಕೊಂಡು ಹೋಗಿರುವ ಆನವೇರಿಯ ಗುಜರಿಯವರ ಮೇಲೆ ಕ್ರಮ ಜರುಗಿಸಬೇಕು ಎಂದು ಆರೋಪಿಸಿದ್ದಾರೆ. ಶಾಲಾ ಕಟ್ಟಡ ತೆರವು ಮಾಡಿದ ಜೆಸಿಬಿ ಯಂತ್ರವನ್ನು ಕೂಡಲೆ […]

Continue Reading

ಸಾಗರ | ಎರಡು ಕಿ. ಮೀ. ರಸ್ತೆ ನಿರ್ಮಿಸಿ ಗ್ರಾಮಸ್ಥರಿಂದ ವಿನೂತನ‌ ಪ್ರತಿಭಟನೆ

ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಗ್ರಾಮೀಣ ಭಾಗಗಳು ಅಭಿವೃದ್ದಿ ಆಗದೆ ಹೋದರೆ ದೇಶ ಅಭಿವೃದ್ದಿ ಆಗುವುದಿಲ್ಲ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಪಡವಗೋಡು ಗ್ರಾಮದಲ್ಲಿ ಎರಡು ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ಮನವಿ ನೀಡಿದರೂ ಸ್ಪಂದಿಸದೆ ನಿರ್ಲಕ್ಷ್ಯ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ವಂತ ಹಣ ಹಾಕಿ ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಯನ್ನು ಪ್ರತಿಭಟನೆ ರೂಪದಲ್ಲಿ ನಿರ್ವಹಿಸಿದೆ ಎಂದು ಹೇಳಿದರು. ರೈತ ಸಂಘದ ಕಾರ್ಯಾಧ್ಯಕ್ಷ […]

Continue Reading

ಶಿಕಾರಿಪುರ | ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ; ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಶಿವು ಹುಲ್ಮಾರ್ ಯುವ ಕಾಂಗ್ರೆಸ್ ಅಧ್ಯಕ್ಷರು ಶಿಕಾರಿಪುರ ಬ್ಲಾಕ್, ಯುವ ಕಾಂಗ್ರೆಸ್ ಮುಖಂಡ ಶರತ್ MH ಮತ್ತು ವಸತಿ ನಿಲಯದ ವಿದ್ಯಾರ್ಥಿಗಳಾದ ಗಿರೀಶ್ ಮತ್ತು ಇನ್ನೂ ಮುಂತಾದವರು ಇದ್ದರು.

Continue Reading

ಶಿವಮೊಗ್ಗಕ್ಕೆ ನೀಡಬೇಕಿದ್ದ ಹೈಕೋರ್ಟ್ ಪೀಠ ಮಂಗಳೂರಿಗೆ? ; ತೀವ್ರಗೊಂಡ ಹೋರಾಟ

ಇದೇ ವೇಳೆ ರೈತ ಸಂಘದ ನಾಯಕ ಬಸವರಾಜ್ ಮಾತನಾಡಿ, “ಶಿವಮೊಗ್ಗ ಜಿಲ್ಲೆ ಆಡಳಿತಾತ್ಮಕ ಹಾಗೂ ನ್ಯಾಯಾಂಗದ ದೃಷ್ಟಿಯಿಂದ ಪ್ರಮುಖ ಕೇಂದ್ರವಾಗಿದೆ. ಇಲ್ಲಿನ ಜನರ ಅನುಕೂಲತೆ ಪರಿಗಣಿಸದೇ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪುವುದಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಮಾತನಾಡಿ, “ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಜೂನ್ 1ರಂದು ಮಾನ್ಯ ಮುಖ್ಯಮಂತ್ರಿಗಳು ಶಿವಮೊಗ್ಗ ಭೇಟಿ ನೀಡುವ ಸಂದರ್ಭದಲ್ಲಿ ಮನವಿ ಸಲ್ಲಿಸಿ ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲೇ ಸ್ಥಾಪಿಸುವಂತೆ ಆಗ್ರಹಿಸಲಿದ್ದೇವೆ,” ಎಂದು ತಿಳಿಸಿದರು. […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಶಿವಮೊಗ್ಗ | ಯುವ ಕಾಂಗ್ರೆಸ್ ಪ್ರತಿಭಟನೆ ; ಸಂಸದರ ಮನೆ ಮುತ್ತಿಗೆಗೆ ಯತ್ನ..!

ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಕರೆದೊಯ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಮೆರಿಟ್ ಆಧಾರದ ಮೇಲೆ ಜಾರಿಗೆ ತಂದ ನೀಟ್ ವ್ಯವಸ್ಥೆಯು ಇಂದು ಕೋಚಿಂಗ್ ಮಾಫಿಯಾ ಹಾಗೂ ಅಕ್ರಮಗಳ ಕೂಪವಾಗಿ ಬದಲಾಗಿದೆ ಎಂದು ನಾಯಕರು ಆರೋಪಿಸಿದರು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪೋಷಕರ […]

Continue Reading

ಶಿವಮೊಗ್ಗ | ಎನ್.ಎಸ್.ಯು.ಐ ನಿಂದ ಬೃಹತ್ ಪ್ರತಿಭಟನೆ ; ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ

ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು […]

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading