ಬಜೆಟ್ ; ಮಾತಿಗೆ ತಪ್ಪಿಲ್ಲ, ಭರವಸೆಯಂತೆ ನಡೆ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಅಭಿಪ್ರಾಯ

ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರನ್ನು ಇಡುವುದರ ಮೂಲಕ ಸಿದ್ಧರಾಮಯ್ಯನವರು ಸಾಮಾಜಿಕ ಚಳವಳಿಯ ಬದ್ಧತೆಯನ್ನು ಎತ್ತಿಹಿಡಿದಿದ್ದಾರೆ. ಬಡವರಿಗೆ, ರೈತರಿಗೆ ೩೦,೦೦೦ಕೋಟಿ ಬಡ್ಡಿರಹಿತ ಸಾಲಕ್ಕೆ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿಲ್ಲ. ರೈತರ ಬೆಳೆಗೆ ಒಳ್ಳೆಯ ಬೆಲೆಯನ್ನೂ ನೀಡಿಲ್ಲ. ಅಡುಗೆ ಅನಿಲ ಸಿಲಿಂಡರ್ ಗೆ ಇಂದಿನಿಂದ ಕೇಂದ್ರ ೬೦ ರೂ. ಜಾಸ್ತಿ ಮಾಡಿದೆ. ಜಿಎಸ್‌ಟಿ ದರವನ್ನು ಇಳಿಸಿ ಅದರಿಂದಲೂ ರಾಜ್ಯ ಸರ್ಕಾರಕ್ಕೆ ೧೦ ಸಾವಿರ ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ರಾಜ್ಯದ ಆದಾಯದಲ್ಲಿ ಜಿಎಸ್‌ಟಿಯಿಂದ ಶೇ.೫೩ರಷ್ಟು ಬರಬೇಕಾಗಿದ್ದು, […]

Continue Reading

ಬಜೆಟ್‌ನಲ್ಲಿ ಶಿವಮೊಗ್ಗ ಜಿಲ್ಲೆಗೆ ಶೂನ್ಯ ಕೊಡುಗೆ : ಶಾಸಕ ಚನ್ನಬಸಪ್ಪ ಆರೋಪ

ನಗರಾಧ್ಯಕ್ಷ ಮೋಹನ್‌ರಡ್ಡಿ, ಪ್ರಮುಖರಾದ ಎಸ್. ಜ್ಞಾನೇಶ್ವರ್, ಹೆಚ್.ಕೆ. ದೀನ್‌ದಯಾಳ್, ಶ್ರೀನಾಗ್, ನವುಲೆ ಮಂಜುನಾಥ್, ಈಶ್ವರಪ್ಪ ಉಪಸ್ಥಿತರಿದ್ದರು.

Continue Reading

ಬ್ರದರ್ಸ್ ಬಜೆಟ್.. ಓಲೈಕೆ ರಾಜಕಾರಣವೇ ಪರಮ ಗುರಿ ; ಬಿಜೆಪಿ ಟ್ವೀಟ್

ಅಂತೆಯೇ ‘ರಾಜ್ಯದ ಅತಿಥಿ ಶಿಕ್ಷಕರಿಗೆ ಕಳೆದ 5 ತಿಂಗಳಿಂದ ಗೌರವ ಧನ ನೀಡದ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು, ಬಡ ಶಿಕ್ಷಕರಿಗೆ ನೀಡುವ ಒಂದು ಸಾವಿರ ನೀಡಲೂ ಸರ್ಕಾರದ ಬಳಿ ಹಣವಿಲ್ಲವೇ? ಕಳೆದ 5 ತಿಂಗಳಿನಿಂದ ಸಂಬಳವಿಲ್ಲದೆ ಶಿಕ್ಷಕರ ಜೀವನ ಬೀದಿಗೆ ಬಂದಿದೆ. ಹಬ್ಬ-ಹರಿದಿನಗಳು ಸಾಲದ ಸುಳಿಯಲ್ಲಿ ಕಳೆದುಹೋಗಿವೆ. ವರ್ಗಾವಣೆ, ಕಮಿಷನ್ ದಂಧೆಯಲ್ಲಿ ಮುಳುಗಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸಿಎಂ ಅವರೇ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಿ […]

Continue Reading

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ : ಡಾ. ಧನಂಜಯ ಸರ್ಜಿ

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಲ ಪಡೆಯುವ ಅವಕಾಶವಿದ್ದರೂ, ಮಿತವ್ಯಯ ಮತ್ತು ಜವಾಬ್ದಾರಿಯುತ ಬಜೆಟ್ ಮಂಡಿಸುವ ಮೂಲಕ ಹಣಕಾಸು ಶಿಸ್ತು ಕಾಪಾಡಲಾಗಿತ್ತು, 2026–27ರ ಬಜೆಟ್‌ನಲ್ಲಿ ₹22,957 ಕೋಟಿ ಆದಾಯ ಕೊರತೆ ಇದೆ. ದಿನನಿತ್ಯದ ಖರ್ಚಿಗೂ ಸಾಲ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯವನ್ನು ತೋರಿಸುತ್ತದೆ ಎಂದರು. ಪಂಚ ಗ್ಯಾರಂಟಿ ಯೋಜನೆಗಳಿಗಾಗಿಯೇ ₹51,034 ಕೋಟಿ ಮೀಸಲಿಡಲಾಗಿದ್ದು, ರಾಜ್ಯದ ಒಟ್ಟು ಕಂದಾಯ ಸ್ವೀಕೃತಿಯ 17% ಹಣ ಕೇವಲ ಈ ಯೋಜನೆಗಳಿಗೆ […]

Continue Reading

ತುಷ್ಟೀಕರಣ ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ

ಮತ್ತೊಂದೆಡೆ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್ ಹಾಗೂ ತಮಿಳುನಾಡು ಮುಂತಾದ ರಾಜ್ಯಗಳು ಭಾರೀ ಪ್ರಮಾಣದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಿರುವಾಗ, ಕರ್ನಾಟಕದಲ್ಲಿ ಆಡಳಿತಾತ್ಮಕ ವಿಳಂಬ, ಹೆಚ್ಚುತ್ತಿರುವ ತೆರಿಗೆಗಳು ಹಾಗೂ ಅನಿಶ್ಚಿತ ನೀತಿಗಳ ಪರಿಣಾಮವಾಗಿ ಹೂಡಿಕೆದಾರರು ಹಿಂಜರಿಯುತ್ತಿರುವುದು ಸ್ಪಷ್ಟವಾಗಿದೆ. ವಿದ್ಯುತ್ ದರ ಹಾಗೂ ಭೂಮಿಯ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆಗಳು ಇತರ ರಾಜ್ಯಗಳತ್ತ ಮುಖ ಮಾಡುತ್ತಿರುವುದು ರಾಜ್ಯದ ಆರ್ಥಿಕತೆಗೆ ಹಿನ್ನಡೆಯಾಗಿದೆ.ಅತ್ಯಂತ ಮುಖ್ಯವಾಗಿ, *ರಾಜ್ಯದ ಯುವಕರು ಇಂದು ಉದ್ಯೋಗಕ್ಕಾಗಿ ಆತಂಕದಲ್ಲಿದ್ದಾರೆ. ಬಜೆಟ್‌ನಲ್ಲಿ ಉದ್ಯೋಗದ ಬಗ್ಗೆ ಹಲವಾರು […]

Continue Reading

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ ; ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪೈಕಿ ಗುಜರಾತ್‌ನ ಮಾಜಿ ಹಣಕಾಸು ಸಚಿವ (ಕರ್ನಾಟಕದ ಮಾಜಿ ರಾಜ್ಯಪಾಲ) ವಜುಭಾಯಿ ವಾಲಾ ಅವರು 18 ಬಾರಿ ಬಜೆಟ್ ಮಂಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 17 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮಟ್ಟಿಗೆ ಸಿದ್ದರಾಮಯ್ಯನವರದ್ದೇ ಅತಿ ದೊಡ್ಡ ದಾಖಲೆಯಾಗಿದೆ. ಕೆ ರೋಸಯ್ಯ: 16 ಬಜೆಟ್‌ಗಳು – ಅವಿಭಜಿತ […]

Continue Reading

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ : ಚೇತನ್ ಗೌಡ ಅಭಿಪ್ರಾಯ

ಹಾಗೆಯೇ ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ಈ ಬಜೆಟ್ ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವ ದೂರದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿಗೆ ಬಜೆಟ್ ಮಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Continue Reading

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. ‘ಖಾತರಿ’ ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ […]

Continue Reading

ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ […]

Continue Reading