ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading