ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ತೊಂದರೆ ಆಗುವುದಿಲ್ಲ : ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿರುವ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ

ರಾಜ್ಯ ಸರ್ಕಾರದ ಈ ನಿರ್ಧಾರವು ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ವಿರುದ್ಧವಾಗಿಲ್ಲ. ರೈತರಿಗೆ ಅಗತ್ಯವಾದ ಬೆಂಬಲ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಖಾದರ್ ಭರವಸೆ ನೀಡಿದರು. ಗುಟ್ಕಾ ಹಾಗೂ ಪಾನ್ ಮಸಾಲ ಬಳಕೆಯಿಂದ ಸಾರ್ವಜನಿಕ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಪರಿಗಣಿಸಿ ನಿಷೇಧ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧ ಆದೇಶವನ್ನು ಸದ್ಯಕ್ಕೆ ವಾಪಸ್ ಪಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗುಟ್ಕಾ ನಿಷೇಧದ ಕುರಿತು ಅಡಿಕೆ ಬೆಳೆಗಾರರಲ್ಲಿ ಉಂಟಾಗಿದ್ದ ಆತಂಕಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ.

Continue Reading

ತೀರ್ಥಹಳ್ಳಿ | ಮುಖ್ಯಮಂತ್ರಿಗಳು ಅಡಿಕೆ ಬೆಳೆಗಾರರು, ರೈತರ ಕಲ್ಯಾಣ ಬಯಸಬೇಕು ; ಶಾಸಕ ಆರಗ ಜ್ಞಾನೇಂದ್ರ

ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ರೈತರ ಕಲ್ಯಾಣ ಬಯಸಬೇಕು ಎಂದು ವಿನಂತಿಸುತ್ತೇನೆ ಎಂದರು. ಅಡಿಕೆ ಬೆಳೆಗಾರರ ಹಿತಾಸಕ್ತಿಯೇ ನಮ್ಮ ಆದ್ಯತೆ.ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಜೀವನೋಪಾಯಕ್ಕೆ ಧಕ್ಕೆಯಾಗುವಂತೆ ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ರೈತರ ಹಕ್ಕು ಮತ್ತು ಬದುಕಿನ ರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ ಎಂದು ಶಾಸಕರು ತಿಳಿಸಿದ್ದಾರೆ.

Continue Reading

1776 ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣದಲ್ಲಿ ಶಾಮಿಲಾದ ಐಎಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ : ನೈಜ ಹೋರಾಟಗಾರರ ವೇದಿಕೆ ಆಗ್ರಹ

ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಅನಾಥ ಹೆಣ್ಣು ಮಕ್ಕಳು, ಪ್ರೇಮ ವೈಫಲ್ಯದಿಂದ ಮನೆ ಬಿಟ್ಟು ಓಡಿ ಹೋಗುವ ಹೆಣ್ಣು ಮಕ್ಕಳು, ಬಡತನದಿಂದ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷೆ ಬೇಡುವ ಹೆಣ್ಣು ಮಕ್ಕಳು ಮತ್ತು ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬರುವ ಹೆಣ್ಣು ಮಕ್ಕಳನ್ನು ಮೆಜೆಸ್ಟಿಕ್ ಅಂತ ದೊಡ್ಡ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಸಂಚರಿಸುವ ಏನು ತಿಳಿಯದ ಮುಗ್ಧ ಹೆಣ್ಣು ಮಕ್ಕಳನ್ನು ತೊಳಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಅವರನ್ನು ರಕ್ಷಿಸಿ ಸ್ವೀಕಾರ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗುತ್ತದೆ, ಅಲ್ಲಿ […]

Continue Reading

ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ನಿಷೇಧ

ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.

Continue Reading

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ; ಮಂಕಾಳ ವೈದ್ಯಗೆ ಉಪಸಭಾಪತಿ

ಹೈಕಮಾಂಡ್ ಕಳುಹಿಸಿದ ಪಟ್ಟಿಯಲ್ಲಿ ಅವರನ್ನು ಉಪಾಸಭಾಧ್ಯಕ್ಷರನ್ನಾಗಿ ನೇಮಿಸಲು ಆದೇಶಿಸಲಾಗಿತ್ತು. ಆದರೆ ಇದೀಗ ಅದರಿಂದಲೂ ಕೊಕ್ ನೀಡಿ, ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Continue Reading

ಬೆಂಗಳೂರು ಗ್ರಾಮಾಂತರ | ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 20/08/2026 ಗುರುವಾರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 20/08/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು […]

Continue Reading

ಬೆಂಗಳೂರು ನಗರ ಪೊಲೀಸ್‌ ಆಯುಕ್ತಾಲಯವೂ ಇನ್ನು 5 ಭಾಗ : ಮಹಾನಗರಕ್ಕಿನ್ನು ಐವರು ಕಮಿಷನರ್‌, ಒಬ್ಬ ಮುಖ್ಯಸ್ಥ!

ಅಲ್ಲದೆ, ಹೊಸ ಸಂಚಾರ ಪೊಲೀಸ್‌ ಠಾಣೆಗಳ ಸ್ಥಾಪನೆಗೂ ಅವಕಾಶ ಕಲ್ಪಿಸುವಂತೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ. ಹೆಚ್ಚುತ್ತಿರುವ ನಗರದ ಭೌಗೋಳಿಕ ವ್ಯಾಪ್ತಿ, ಜನಸಂಖ್ಯೆ, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ನಿರ್ವಹಣೆ ಸುಗಮಗೊಳಿಸುವ ಸಲುವಾಗಿ ಐದು ಪೊಲೀಸ್‌ ಕಮಿಷನರೇಟ್‌ ವಿಭಜಿಸುವ ಪ್ರಸ್ತಾಪ ಮಂಡಿಸಲಾಗಿದೆ. ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು (ಎಡಿಜಿಪಿ) ಶ್ರೇಣಿಯ ಅಧಿಕಾರಿಯು ಮುಖ್ಯ ಪೊಲೀಸ್‌ ಮುಖ್ಯ ಆಯುಕ್ತರ ಹುದ್ದೆಗೆ ನಿಯೋಜನೆಯಾಗಲಿದ್ದು, ಐವರು ಪೊಲೀಸ್‌ ಕಮಿಷನರ್‌ಗಳು ಅವರ ಅಧೀನದಲ್ಲಿರಲಿದ್ದಾರೆ. ಐಜಿಪಿ ಅಥವಾ ಡಿಐಜಿಪಿ ರಾರ‍ಯಂಕ್‌ನ ಅಧಿಕಾರಿಗಳು ಕಮಿಷನರ್‌ಗಳಾಗಲಿದ್ದು, ಅವರ ಅಧೀನದಲ್ಲಿಡಿಸಿಪಿ, ಸಂಚಾರ ಡಿಸಿಪಿಗಳಿರಲಿದ್ದಾರೆ. […]

Continue Reading

ಹೈಕಮಾಂಡ್ ನ ಮನಸ್ಸು ಗೆದ್ದ ಮಧು ಬಂಗಾರಪ್ಪಗೆ ಮತ್ತೊಮ್ಮೆ ಸಚಿವ ಸ್ಥಾನ..!

ಇದಕ್ಕೆ ಮತ್ತೊಂದು ಕಾರಣ ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ ಅವರ ಪುತ್ರ ಜೊತೆಗೆ ಎನ್ನುವುದರ ಜೊತೆಗೆ, ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮೊದಲ ಬಾರಿಗೆ ಸಚಿವರನ್ನಾಗಿ ಮಾಡಿದ್ದರು. ರಾಜಕೀಯ ಗುರುವಿನ ಋಣವನ್ನು ತೀರಿಸಲು ಡಿ.ಕೆ.ಶಿವಕುಮಾರ್ ಅವರು ಮಧುಬಂಗಾರಪ್ಪ ಅವರನ್ನು ತಮ್ಮ ಸಚಿವ ಸಂಪುಟದಲ್ಲೂ ಮಂತ್ರಿಯನ್ನಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಪಟ್ಟಿಯು ಪ್ರಕಟಗೊಳ್ಳುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕ‌ರ್, ಎನ್.ರಮೇಶ್ […]

Continue Reading

ಬೆಂಗಳೂರು | ಉಚಿತ ಅಣಬೆ ಬೇಸಾಯ ತರಬೇತಿ : ಅರ್ಜಿ ಆಹ್ವಾನ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 13/08/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 13/08/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು […]

Continue Reading