ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವರು

ದ್ವಿತೀಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ ಫೆಬ್ರವರಿ 28: ಕನ್ನಡ, ಅರೇಬಿಕ್, ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ, ಮಾರ್ಚ್ 6: ಭೌತಶಾಸ್ತ್ರ, ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ, ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, ಮಾರ್ಚ್ 10: ಅರ್ಥಶಾಸ್ತ್ರ, ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ […]

Continue Reading

KSRTC ಬಸ್‌ಗೆ ಡಿಕ್ಕಿ ಹೊಡೆದ ಕಾರು ; ಐವರು ಸಾವು

ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ. ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

3.5 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಅಧಿಕಾರಿ ಬಂಧನ

ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ. ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.

Continue Reading

ಸಿಎಂ ಹೆಸರಲ್ಲಿ ನಕಲಿ ವರ್ಗಾವಣೆ ಪತ್ರ ; ದೂರು ದಾಖಲು

ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ. “ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

Continue Reading

ಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ

ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]

Continue Reading

ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ತಾಳಗುಪ್ಪ- ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

ಪ್ರಯಾಣಿಕರೊಬ್ಬರು ರೈಲ್ ಮದದ್ (RailMadad) ಪೋರ್ಟಲ್‌ನಲ್ಲಿ ನೀಡಿದ ದೂರಿಗೆ ಇಲಾಖೆ ಉತ್ತರ ನೀಡಿದೆ. ಉತ್ತರದಲ್ಲಿ ರೈಲು ಸಂಖ್ಯೆ 16582 (SMET-YPR) ಎಕ್ಸ್‌ಪ್ರೆಸ್ ರೈಲಿನ ಎಸ್-9 (S-9) ಬೋಗಿಯಲ್ಲಿ ನಡೆದ ಘಟನೆ ಬಗ್ಗೆ ಪ್ರಯಾಣಿಕೊಬ್ಬರು ದೂರು ನೀಡಿದ್ದು, ಅವರ ದೂರಿನಂತೆ ರೈಲ್ವೆ ಬೋಗಿಯೊಳಗೆ ನುಗ್ಗಿದ್ದ ದುಷ್ಕರ್ಮಿ ದೂರುದಾರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯುತ್ನಿಸಿದ. ಅಷ್ಟೆ ಅಲ್ಲದೆ ಅದೇ ಬೋಗಿಯಲ್ಲಿದ್ದ ಇನ್ನೊಬ್ಬ ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಅವರ ಬಳಿ ಇದ್ದ ಮೋಟೋರೋಲಾ (Motorola) ಮೊಬೈಲ್ ಫೋನ್ ಅನ್ನು […]

Continue Reading

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು. ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1 7ನೇ ಮೇನ್ 16 ನೇ ಕ್ರಾಸ್ ಇಡಲಾಗುವುದು ಎಂದು ಗಿರೀಶ್ ಲಿಂಗಣ್ಣ […]

Continue Reading