ಬೆಂಗಳೂರಿನಲ್ಲಿ ಭಾರೀ ಮಳೆ ; ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತ, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಗೋಡೆ ಕುಸಿದ ಬೆನ್ನಲ್ಲೇ ಸ್ಥಳದಲ್ಲಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ ಕೆಲವರನ್ನ ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆಗೆ ದೊಡ್ಡ ಟಾರ್ಪಾಲ್ ಹಾಕಿ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಜೋರಾಗಿ ಮಳೆ ಸುರಿದ ಪರಿಣಾಮ ಟಾರ್ಪಾಲ್ ಕೆಳಗೆ ಪಾದಚಾರಿಗಳು ನಿಂತುಕೊಂಡರು. ಈ ವೇಳೆ ಬಿರುಗಾಳಿ ಸಮೇತ ಸುರಿದ ಜೋರು ಮಳೆಗೆ ಕಾಂಪೌಂಡ್ ಕುಸಿದು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Continue Reading