ಶಿವಮೊಗ್ಗ | ಶರಾವತಿ ನಗರದ ನೂತನ ಯೋಗ ಭವನ ಕಾಮಗಾರಿ ಪರಿಶೀಲಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ ; ವಾರಾಂತ್ಯದೊಳಗೆ ಲೋಕಾರ್ಪಣೆಗೆ ಕಟ್ಟುನಿಟ್ಟಿನ ಸೂಚನೆ
ಅಂಗನವಾಡಿ ಕೇಂದ್ರಕ್ಕೆ ಭೇಟಿ: ಇದೇ ಸಂದರ್ಭದಲ್ಲಿ ಯೋಗ ಭವನದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಶಾಸಕರು ದಿಢೀರ್ ಭೇಟಿ ನೀಡಿದರು. ಕೇಂದ್ರದ ಭೌತಿಕ ಸ್ಥಿತಿಗತಿ, ಸ್ವಚ್ಛತೆ ಹಾಗೂ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಸಿಬ್ಬಂದಿಗೆ ಸೂಚಿಸಿದರು. ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
Continue Reading
