ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಅಗ್ರಹಿಸಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿದ್ದಂತೆ ಪೊಲೀಸರ ತಡೆಗೋಡೆಗಳನ್ನು ಬೇಧಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರ ಮುಖಂಡರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಟ್ಟಡದ ಮೆಟ್ಟಿಲುಗಳ ಮೇಲೆಯೆ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಾದಾರ ಮಹಾ ಸಭಾದ ಜಿಲ್ಲಾ ಪ್ರಧಾನಕಾರ್ಯದರ್ಶಿ ಆರ್.ತೇಜೇಸ್ ಸುಪ್ರೀಂಕೋರ್ಟು ಒಳಮೀಸಲಾತಿ ಪರ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಅನಗತ್ಯ ವಿಳಂಬ ಅನುಸರಿಸುತ್ತಿದೆ. 35 ವರ್ಷಗಳಿಂದ […]

Continue Reading

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. ‘ಖಾತರಿ’ ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ […]

Continue Reading

ಶಿವಮೊಗ್ಗ | ಗುತ್ತಿಗೆದಾರರಿಗೆ ಹಣ ಪಾವತಿಸಲಾಗದಷ್ಟು ಸರ್ಕಾರ ದಿವಾಳಿ : ಕೆ. ಎಸ್. ಈಶ್ವರಪ್ಪ ವಾಗ್ದಾಳಿ

ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಟೆಂಡ‌ರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್‌ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು. ಸರ್ಕಾರದ […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ ; ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶ್ರೀಮತಿ ಸಂಗೀತ ನಾಗರಾಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಲತೇಶ್ ಸಂತೋಷ್ ಬಳ್ಳೇಕೆರೆ ರಾಜೇಶ್ ಕಾಮತ್ ದಿವಾಕರ್ ಶೆಟ್ಟಿ ಹಾಗೂ ಮಾಧ್ಯಮ ಪ್ರಮುಖವಾದ ಚಂದ್ರಶೇಖರ್ ಎಸ್. ಉಪಸ್ಥಿತರಿದ್ದರು.

Continue Reading

ಬೆಳಗಾವಿ | ಅಝಾನ್ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ಸರ್ಕಾರದ ದ್ವಂದ್ವ ನೀತಿ : ಡಿ ಎಸ್ ಅರುಣ್ ಖಂಡನೆ

ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.

Continue Reading

ಬೆಂಗಳೂರು | ಎಐಎಸ್ಇಸಿ ಕರ್ನಾಟಕ ರಾಜ್ಯ ಸಮಿತಿಯಿಂದ ಕೆಪಿಎಸ್ ಮ್ಯಾಗ್ನೆಟಿಕ್ ಶಾಲೆ, ವಿರೋಧಿಸಿ ಸಮಾವೇಶ

ಶಿಕ್ಷಣ ಸಚಿವರು ಕೇವಲ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡುತ್ತಿದ್ದಾರೆ ವಿನಃ ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬಲಪಡಿಸುವ ಕಾರ್ಯಗಳನ್ನು ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸರ್ಕಾರಕ್ಕೆ ಹಾಗೂ ಸಚಿವರಿಗೆ ನಿಜವಾಗಿಯೂ ಕನ್ನಡ ಶಾಲೆಗಳ ಬಗ್ಗೆ, ಬಡವರು, ದಲಿತರು, ರೈತ-ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಶಿಕ್ಷಣ ಇಲಾಖೆಯಿಂದ ಕೆ.ಪಿ.ಎಸ್.-ಮ್ಯಾಗ್ನೆಟ್ ಶಾಲೆಗಳ ಬಗ್ಗೆ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯಬೇಕು ಹಾಗೂ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶಗಳನ್ನು ಹೊರಡಿಸಬೇಕೆಂದು ಆಗ್ರಹಿಸಿದರು. ಶಿಕ್ಷಣ ತಜ್ಞರಾಗಿರುವ ಪ್ರೊ. ನಿರಂಜನ ಆರಾಧ್ಯರವರು ಮಾತನಾಡುತ್ತಾ […]

Continue Reading

ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲವೆಂಬ ಸರ್ಕಾರಿ ಆದೇಶ, ರಾಜ್ಯ ಸರ್ಕಾರ ತುರ್ತಾಗಿ ಹೊರಡಿಸಲಿ : ಎ ಐ ಎಸ್ ಇ ಸಿ ಸೋಮಶೇಖರ್ ಗೌಡ ಆಗ್ರಹ

ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ 2025 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ? ಈ ಸರ್ಕಾರಿ ಆದೇಶದಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಲಾಗಿದೆ. ಇದರೊಟ್ಟಿಗೆ, ಒಂದು ನಿರ್ದಿಷ್ಟ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ’ ಯಾವ ಯಾವ ಸರ್ಕಾರಿ ಶಾಲೆಗಳು ವಿಲೀನಾಗಬೇಕು (ಅಂದರೆ ಮುಚ್ಚಬೇಕು) ಎಂಬುದರ ಬಗ್ಗೆ ಒಂದಾದ ಮೇಲೆ ಒಂದು ಆದೇಶಗಳನ್ನು […]

Continue Reading