ರಿಪ್ಪನ್‌ಪೇಟೆ | ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 1.6 ಕೆ.ಜಿ ತೂಕವಿರುವ ಮಗು ಸದ್ಯ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಆರೈಕೆ ನೀಡಿ, ಹೆಚ್ಚಿನ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.​ ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Continue Reading