ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಾರ್ಡ್ ಸಭೆ

ಶಾಲೆಯ ಶೌಚಾಲಯ ಕಾಮಗಾರಿ ನಿರ್ಮಾಣ ಹಂತದಲ್ಲಿದ್ದು, ಅದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಬೇಡಿಕೆ ವ್ಯಕ್ತಪಡಿಸಿದರು. ಮಕ್ಕಳಿಗೆ ಆಟದ ಮೈದಾನವಿಲ್ಲದ ಕಾರಣ, ಆಟದ ಮೈದಾನದ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿನಂತಿಸಿದರು. ಮಳೆಗಾಲದಲ್ಲಿ ಊಟ ಮಾಡಲು ದೊಡ್ಡ ತೊಂದರೆ ಎದುರಾಗುತ್ತಿರುವುದರಿಂದ ಊಟದ ಹಾಲ್ ನಿರ್ಮಿಸಿ ನೀಡುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಮಕ್ಕಳು ತಮ್ಮ ಅಗತ್ಯಗಳನ್ನು ಹಿಂಜರಿಯದೆ ಧೈರ್ಯವಾಗಿ ಅಧಿಕಾರಿಗಳ ಮುಂದೆ ಮಂಡಿಸಿದ ರೀತಿಗೆ ಅತಿಥಿಗಳು ಪ್ರಶಂಸೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇಡಿಕೆಗಳನ್ನು ಆದ್ಯತೆಯಂತೆ ಪರಿಗಣಿಸುವುದಾಗಿ ಭರವಸೆ ನೀಡಿದರು. ಭದ್ರಾಪುರ […]

Continue Reading