ಸಿಇಟಿ ಪರೀಕ್ಷೆಯಲ್ಲಿ ಅವಾಂತರ : ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

ಈ ಸಂದರ್ಭದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ, ಅದನ್ನೂ ಅಧಿಕಾರಿಗಳು ನಿರಾಕರಿಸಿದರೆಂದು ಆರೋಪಿಸಲಾಗಿದೆ.ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡೆ ವಿದ್ಯಾರ್ಥಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.ಈ ಅವಮಾನಕರ ಪರಿಸ್ಥಿತಿಯ ನಡುವೆಯೇ ಸುಪ್ರಿತ್ ಪರೀಕ್ಷೆಯನ್ನು ಬರೆದಿದ್ದಾನೆ. ಪರೀಕ್ಷೆ ಮುಗಿದ ನಂತರ, ಕಸದ ಬುಟ್ಟಿಯಲ್ಲಿ ಹಾಕಲಾಗಿದ್ದ ಜನಿವಾರವನ್ನು ಮರಳಿ ತೆಗೆದುಕೊಂಡು ಮನೆಗೆ ಹೋಗಿದ್ದಾನೆ.ಬಳಿಕ […]

Continue Reading

ದ್ವಿತೀಯ ಪಿಯು ಫಲಿತಾಂಶ ಸರ್ಕಾರದ ಅಧಿಕೃತ ವೆಬ್‌ಸೈಟ್‌ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ 600ಕ್ಕೆ 630, 680 ಅಂಕ

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಫಲಿತಾಂಶ ಪ್ರಕಟಿಸುವಾಗ ಅಧಿಕಾರಿಗಳ ಗಮನ ಎಲ್ಲಿತ್ತು ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ದೋಷವನ್ನು ಒಪ್ಪಿಕೊಂಡು, ತಾಂತ್ರಿಕ ಸಮಸ್ಯೆಯಿಂದ ವ್ಯತ್ಯಯ ಉಂಟಾಗಿದೆ ಎಂದು ಸ್ಪಷ್ಟಪಡಿಸಿದ್ದು, ತಪ್ಪಾಗಿ ಮುದ್ರಿತವಾಗಿರುವ ಅಂಕಪಟ್ಟಿಗಳಿಗೆ ಪರಿಷ್ಕೃತ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ. ಏಪ್ರಿಲ್ 9ರಂದು ಪ್ರಕಟವಾದ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ […]

Continue Reading

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಗುರುವಾರ, ಏಪ್ರಿಲ್ 9 ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಇನ್ನೊಂದೆಡೆ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ‘‘ಈ ಬಾರಿ ಡಿಜಿ ಲಾಕರ್‌ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದ್ದು, […]

Continue Reading

ಒಂದನೇ ತರಗತಿ, ಎಲ್‌ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿಯನ್ನು ನೀಡಲಾಗುತ್ತಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಇದು ಅನ್ವಯವಾಗಲಿದ್ದು, 6 ವರ್ಷ ತುಂಬಲು 60 ದಿನಗಳ ಕೊರತೆ ಇದ್ದರೂ ಅಂತಹ ಮಕ್ಕಳಿಗೆ ಪ್ರವೇಶಾತಿ ಲಭ್ಯವಾಗಲಿದೆ.ಈ 60 ದಿನಗಳ ವಯೋಮಿತಿ ರಿಯಾಯಿತಿಯು ಕೇವಲ 1ನೇ ತರಗತಿಗೆ ಮಾತ್ರ ಸೀಮಿತವಾಗಿರದೆ, ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳ ದಾಖಲಾತಿಗೂ ಅನ್ವಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಶೀಘ್ರದಲ್ಲೇ ಶಾಶ್ವತ ಕಾನೂನು: ಪ್ರಸ್ತುತ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಸೂಕ್ತ ನಿಯಂತ್ರಣ ವ್ಯವಸ್ಥೆ ಇಲ್ಲದಿರುವುದರಿಂದ […]

Continue Reading

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ!

ಶಾಲೆಗಳ ಜಮೀನುಗಳು ಯಾವುದೇ ಕಾರಣಕ್ಕೂ ಒತ್ತುವರಿಯಾಗದಂತೆ ತಡೆಯಲು ಮತ್ತು ಅನ್ಯ ಕಾರ್ಯಗಳಿಗೆ ಬಳಕೆಯಾಗದಂತೆ ಕಟ್ಟುನಿಟ್ಟಿನ ರಕ್ಷಣೆ ಒದಗಿಸಲು ಈ ಕಾನೂನು ಬಲ ತುಂಬಲಿದೆ.ಮಕ್ಕಳ ಭವಿಷ್ಯ ಹಾಗೂ ಸರ್ಕಾರಿ ಶಾಲೆಗಳ ಸಬಲೀಕರಣವೇ ನಮ್ಮ ಸರ್ಕಾರದ ಮೂಲ ಮಂತ್ರ. ಈ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ತಮ್ಮ ಅತ್ಯಮೂಲ್ಯವಾದ ಸಲಹೆ-ಸೂಚನೆಗಳನ್ನು ನೀಡಿ ಒಮ್ಮತದ ಅಂಗೀಕಾರಕ್ಕೆ ಕಾರಣರಾದ ಸನ್ಮಾನ್ಯ ಸಭಾಪತಿಗಳಿಗೆ ಹಾಗೂ ವಿಧಾನ ಪರಿಷತ್ತಿನ ಎಲ್ಲಾ ಸದಸ್ಯರಿಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪನವರು ಇಂದು ಧನ್ಯವಾದ ತಿಳಿಸಿದರು.

Continue Reading

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ ; ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಪರೀಕ್ಷಾ ಸಿದ್ಧತೆಗಾಗಿ ಈಗಾಗಲೇ 3 ಪೂರ್ವಸಿದ್ಧತಾ (Preparatory) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಮಕ್ಕಳಲ್ಲಿನ ಭಯವನ್ನು ಹೋಗಲಾಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳು ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೊಸಹೋಗಬಾರದು” ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿನಂತಿಸಿದರು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗಿದೆ. ಪ್ರತಿದಿನ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಪೋಲೀಸ್ ಸಿಬ್ಬಂದಿಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿದೆ. ಆಯಾ ಜಿಲ್ಲಾ ಆಡಳಿತದ ಮೂಲಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. […]

Continue Reading

ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ

ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಇನೋವೇಟಿವ್ (Innovative) ಸಿಸ್ಟಮ್‌ಗಳ ಕಡೆಗೆ ಗಮನ ಹರಿಸಬೇಕು. “ಆಕಾಶವೇ ಎಲ್ಲೆ” (Sky is the limit) ಎಂಬಂತೆ ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದ ಸರ್ಕಾರಿ ಶಾಲೆಗಳ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಅರಿವು ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು […]

Continue Reading

SSLC ಪೂರ್ವ ಸಿದ್ಧತಾ ಪರೀಕ್ಷಾ ಕೊಠಡಿಗೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಭೇಟಿ ; ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ ವಿದ್ಯಾರ್ಥಿಗಳಿಗೆ ಧೈರ್ಯದ ನುಡಿ”

ನಂತರ ಪರೀಕ್ಷೆ ಬರೆಯುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಸಿದರು.

Continue Reading

ಬೆಂಗಳೂರು | ಶಿಕ್ಷಕರ ತಾಂತ್ರಿಕ,ಆಡಳಿತಾತ್ಮಕ ಸಮಸ್ಯೆ ; ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪದೋನ್ನತಿ (Promotion): ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಿಯಮ 32ರ ಅಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಹಾಗೂ ತತ್ಸಮಾನ ವೃಂದದ ಹುದ್ದೆಗಳಿಗೆ ಪದೋನ್ನತಿ ನೀಡುವ ಕುರಿತು ಚರ್ಚಿಸಲಾಯಿತು. ಸೇವಾ ಶ್ಲಾಘನೆ: ನಿಯಮ 42ರ ಅಡಿ ಕರ್ತವ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಅವರಿಗೆ ‘ಅಫೀಷಿಯೇಟಿಂಗ್ ಚಾರ್ಜ್’ ಮಾಡುವ ಕುರಿತಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಶಿಕ್ಷಣ ಇಲಾಖೆಯ ಬೆನ್ನೆಲುಬಾಗಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಈ ಬಗ್ಗೆ ಇಲಾಖೆಯ ಉನ್ನತ […]

Continue Reading