ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ

ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿರುದ್ದ ABVP ಪ್ರತಿಭಟನೆ

ABVP ಆರೋಪವೇನು? ಅಖಿಲ ಭಾರತೀಯ ವಿದ್ಯಾರ್ಥಿ ಸಂಘ AISA ಪ್ರಾಯೋಜಿತ SPARK ಎನ್ನುವ ಸಂಸ್ಥೆಯ ಮೂಲಕ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸಿದೆ. ದೇಶದ ಗಡಿ ಕಾಯುವ ಸೈನಿಕರನ್ನು(Indian Army) ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮ ಮಾಡಿದ್ದಾರೆ. ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ,ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರುವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಅಪರೇಷನ್ ಸಿಂಧೂರ ಸೈನಿಕ ಕಾರ್ಯಾಚರಣೆಯನ್ನು ಖಂಡಿಸುವ ಚಟುವಟಿಕೆಗಳು ನಡೆಸುತ್ತಿದ್ದರು. […]

Continue Reading

ಶಿವಮೊಗ್ಗ | ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಅವಶ್ಯಕತೆಯಿದ್ದಲ್ಲಿ ಸೂಕ್ತ ಭದ್ರತೆ ಒದಗಿಸಿ ; ಕರವೇ ಸ್ವಾಭಿಮಾನಿ ಬಣ ಅಗ್ರಹ

ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ವಿಶೇಷ ತರಗತಿಗಳನ್ನು ನಡೆಸುವ ಅಗತ್ಯವಿದ್ದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಿ ಅಗತ್ಯ ನಿಯಮಗಳು ಮತ್ತು ಶರತ್ತುಗಳನ್ನು ವಿಧಿಸಬೇಕು. ಆ ನಿಯಮಗಳಿಗೆ ಒಪ್ಪಿಗೆ ನೀಡಿದ ಶಾಲೆಗಳಿಗೆ ಮಾತ್ರ ಇಂತಹ ವಿಶೇಷ ತರಗತಿಗಳನ್ನು ನಡೆಸಲು ಅನುಮತಿ ನೀಡಬೇಕು. ಜೊತೆಗೆ, ವಿಶೇಷ ತರಗತಿಗಳು ಮುಗಿದ ನಂತರ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ತಲುಪುವವರೆಗೆ ಶಾಲಾ ಆಡಳಿತ ಮಂಡಳಿಯೇ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಿಳಿಸಿದೆ. ಈ […]

Continue Reading

ಶಿವಮೊಗ್ಗ | ಸೂಳೆಬೈಲಿನಲ್ಲಿ ಉಪಪೊಲೀಸ್ ಠಾಣೆ ತೆರೆಯಲು ಕ್ರಮ : ಎಸ್ಪಿ ನಿಖಿಲ್

ಪೊಲೀಸರ ಮಾಹಿತಿ ಪ್ರಕಾರ, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಬರ್ತಿದ್ದನಂತೆ. ಈ ವೇಳೆ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅನ್ಯಕೋಮಿನ ಬಾಲಕರು ಸಂಕೇತ್​​ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಾಣ ಉಳಿಯಲಿಲ್ಲ. ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಂಕೇತ್​ ಸಾವಿನ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ; ಸರ್ಕಾರದಿಂದ ಪರಿಹಾರ ಘೋಷಣೆ

ಇದಕ್ಕೂ ಮಧ್ಯೆ, ಮೃತ ಸಂಕೇತ್ ಕುಟುಂಬಕ್ಕೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಮತ್ತು ಶಿಕ್ಷಣ ಇಲಾಖೆಯಿಂದ ₹5 ಲಕ್ಷ ನೀಡಲಾಗುತ್ತದೆ ಎಂದು ಸರ್ಕಾರದ ಪರವಾಗಿ ಪ್ರಭುಲಿಂಗ ಕವಳಿಕಟ್ಟೆ ತಿಳಿಸಿದ್ದಾರೆ. ಗಾಯಗೊಂಡಿರುವ ಗಿರೀಶ್ ಅವರಿಗೆ ಸಹ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರದೇಶದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ […]

Continue Reading

ಶಿವಮೊಗ್ಗ | ಊರಗಡೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಮರ್ಡರ್ ; ನಗರದಲ್ಲಿ ಕಟ್ಟೆಚ್ಚರ ಸ್ಥಳಕ್ಕೆ ಎಸ್ಪಿ ಭೇಟಿ

ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ಬಾಲಕನನ್ನು ಸಂಕೇತ್ (15) ಎಂದು ಗುರುತಿಸಲಾಗಿದ್ದು, ಊರಗಡೂರು ನಿವಾಸಿ ಕುಮಾ‌ರ್ ಅವರ ಪುತ್ರನಾಗಿದ್ದಾನೆ. ಕುಮಾ‌ರ್ ಅವರು ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಊರಗಡೂರಿನ 9ನೇ ತಿರುವಿನ ಬಳಿ ಇರುವ ಸರ್ಕಾರಿ ಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ತರಗತಿ ನಡೆಯುತ್ತಿದ್ದು, ಇಂದು ಸಂಜೆ ಸುಮಾರು 8 ಗಂಟೆಗೆ ತರಗತಿ ಮುಗಿದ ನಂತರ ಹರೀಶ್ […]

Continue Reading

SSLC ಪೂರ್ವ ಸಿದ್ಧತಾ ಪರೀಕ್ಷಾ ಕೊಠಡಿಗೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಭೇಟಿ ; ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ ವಿದ್ಯಾರ್ಥಿಗಳಿಗೆ ಧೈರ್ಯದ ನುಡಿ”

ನಂತರ ಪರೀಕ್ಷೆ ಬರೆಯುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಸಿದರು.

Continue Reading

ಶಿವಮೊಗ್ಗ | ವಾಸವಿ ಯುವಜನ ಸಂಘದ ನೂತನ ಅಧ್ಯಕ್ಷರಾಗಿ ಎಸ್. ಎನ್. ಶ್ರೀನಾಗ್ ಆಯ್ಕೆ

ಶಿವಮೊಗ್ಗ ಆರ್ಯವೈಶ್ಯ ವಾಸವಿ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷರಾದ ಟಿ.ಆ‌ರ್. ಅಶ್ವತ್‌ ನಾರಾಯಣ್‌ ಶೆಟ್ಟಿ ಹಾಗೂ ಶಾರದಾ ಗೋಪಾಲ್‌ ಅವರು ಸಂಘದ ಬ್ಯಾನ‌ರ್ ಅನಾವರಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಯುವಜನ ಮಹಾಸಭಾ ಬೆಂಗಳೂರು ಗಿರಿನಾಡು ವಿಭಾಗದ ಕಾರ್ಯದರ್ಶಿ ಡಿ.ಎಂ. ಅರ್ಜುನ್, ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ ಬೆಂಗಳೂರು ನಿರ್ದೇಶಕ ನಿತಿನ್ ಕಸಲ್ ಸೇರಿದಂತೆ ಅನೇಕ ಗಣ್ಯರು, ಪದಾಧಿಕಾರಿಗಳು ಹಾಗೂ ಸಮಾಜಬಾಂಧವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ವಿಶೇಷ ದಾಖಲಾತಿ ಅಂದೋಲನ

ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ ಮಾತನಾಡಿ, ‘ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್‌ಜಿ ಹಾಗೂ ಯುಕೆಜಿ ಆರಂಭವಾಗಲಿದೆ. ಜೊತೆಗೆ ಐದನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ. ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು, ನೋಟ್‌ಪುಸ್ತಕಗಳು, ಸಮಗ್ರ ಶಿಕ್ಷಣ ಸೌಲಭ್ಯಗಳು ಹಾಗೂ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಲೆಯಿಂದ ಹೊರಗುಳಿದಿದ್ದ ಒಂದು ಮಗುವನ್ನು ಪೋಷಕರ ಮನವೊಲಿಸಿ ಶಾಲೆಗೆ ಕರೆತರುವ ಮೂಲಕ ದಾಖಲಾತಿ […]

Continue Reading