6,400 ಕೋಟಿ ರೂ. ವೆಚ್ಚದ ಶಿವಮೊಗ್ಗ – ತುಮಕೂರು ಚತುಷ್ಪಥ ಹೆದ್ದಾರಿ ಯೋಜನೆ ಮುಂದಿನ ಮಾರ್ಚ್ ವೇಳೆಗೆ ಪೂರ್ಣ ; ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಈ ಬೃಹತ್ ಯೋಜನೆಗೆ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 1,268.33 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ, ಅರಣ್ಯ ಇಲಾಖೆ ತೆರವು ಹಾಗೂ ರೈಲ್ವೆ ಮೇಲ್ಸೇತುವೆಗಳ (ROB/RUB) ಅನುಮತಿ ಸೇರಿದಂತೆ ಎದುರಾಗಿದ್ದ ತಾಂತ್ರಿಕ ತೊಡಕುಗಳನ್ನು ‘ಭೂಮಿ ರಾಶಿ’ ಹಾಗೂ ‘ಪರಿವೇಶ’ ಪೋರ್ಟಲ್ ಮೂಲಕ ಬಗೆಹರಿಸಲಾಗುತ್ತಿದೆ. ಈ ಬೃಹತ್ ಹೆದ್ದಾರಿ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ – ಬೆಂಗಳೂರು ನಡುವಿನ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಸಾಗಾಣಿಕೆ ಹಾಗೂ […]

Continue Reading

ನವದೆಹಲಿಯಲ್ಲಿ ಪೇಜಾವರ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತ ಸಂಕಲ್ಪ ; ಸಮಾರಂಭದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ

ನಿನ್ನೆಯಿಂದ ಸೆಪ್ಟೆಂಬರ್ 26ರವರೆಗೆ ಶ್ರೀಗಳು ದೆಹಲಿಯಲ್ಲೇ ವಾಸ್ತವ್ಯ ಮಾಡಲಿದ್ದು, ತಮ್ಮ ನಿತ್ಯಾನುಷ್ಠಾನ, ಧರ್ಮ ಪ್ರಚಾರ ಇತ್ಯಾದಿ ಕಾರ್ಯಗಳನ್ನು ನೆರವೇರಿಸಲಿದ್ದಾರೆ. ‘ದೆಹಲಿಯಲ್ಲಿ ಪೇಜಾವರ ಶ್ರೀಗಳು ಚಾತುರ್ಮಾಸ್ಯ ವ್ರತ ಕೈಗೊಂಡಿರುವುದರಿಂದ ದೆಹಲಿಯ ಭಕ್ತರಿಗೆ ಉಡುಪಿ ಶ್ರೀ ಕೃಷ್ಣನ ಮತ್ತು ಗುರುಗಳ ವಿಶೇಷ ಅನುಗ್ರಹಾಶೀರ್ವಾದಗಳು ಪ್ರಾಪ್ತವಾಗಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಶ್ರೀಗಳ ಚಾತುರ್ಮಾಸ್ಯ ವ್ರತವು ದೇಶದಲ್ಲಿ ಶಾಂತಿ, ಸಮೃದ್ಧಿ, ಧರ್ಮ ಹಾಗೂ ಸಾಂಸ್ಕೃತಿಕ ಜಾಗೃತಿಗೆ ಕಾರಣವಾಗಲಿ ಎಂದು ಶ್ರೀಗಳವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರಾರ್ಥನೆ ಸಲ್ಲಿಸಿದರು.

Continue Reading

ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]

Continue Reading

ರಾಜ್ಯದ ಯುವ ಜನತೆಯ ಕೌಶಲ್ಯಾಭಿವೃದ್ಧಿಗೆ ಸುಮಾರು 100 ಕೋಟಿ ರೂ. ನೇರ ನೆರವು ; ಶಿವಮೊಗ್ಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ NAPS-2 ಯೋಜನಾ ವಿಸ್ತರಣೆಗೆ ಸಂಸದರ ಕರೆ

ಇದೇ ವೇಳೆ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ NAPS-2 ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಸ್ಥಳೀಯ ಯುವಕರು ಪಡೆದುಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 56 ನಂದಾಯಿತ ಸಂಸ್ಥೆಗಳ ಮೂಲಕ 882 ಯುವಕರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಮೇಳಗಳನ್ನು (PMNAM – Pradhan Mantri National Apprenticeship Mela) ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗಳೊಂದಿಗೆ […]

Continue Reading

ಶಿವಮೊಗ್ಗ | ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ : ಅಧಿಕಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಕಟ್ಟುನಿಟ್ಟಿನ ಆದೇಶ

ಕೇಂದ್ರ ಭೂಸಾರಿಗೆ ಮಂತ್ರಾಲಯದ ಪ್ರಾದೇಶಿಕ ಅಧಿಕಾರಿಗಳಾದ ಬಿ ಟಿ ಶ್ರೀಧರ್ ರವರು ಮಾತನಾಡಿ, ಅರಣ್ಯ ಬಿಡುಗಡೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಆಗುತ್ತಿರುವ ವಿಳಂಬ ಮತ್ತು ಅದರಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ವಿವರವಾಗಿ ಸಭೆಗೆ ವಿವರಿಸಿ, ಈ ತಿಂಗಳ ಅಂತ್ಯದೊಳಗೆ ಎಲ್ಲಾ ಅರಣ್ಯ ಬಿಡುಗಡೆ ಸಂಬಂಧ ಎಲ್ಲಾ ಪ್ರಕ್ರಿಯೆಗಳನ್ನು ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಯನ್ನು ಅನುಷ್ಟಾನಗೊಳಿಸಲು ಸಹಕಾರ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕೋರಿದರು. ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು […]

Continue Reading

ಶಿರಾಳಕೊಪ್ಪ | ‘ಸಮೃದ್ಧ ಮಣ್ಣು, ಸುಸ್ಥಿರ ಕೃಷಿ’ : ನೂತನ ಮಣ್ಣು ಪರೀಕ್ಷಾ ಕೇಂದ್ರ ಲೋಕಾರ್ಪಣೆ ಮಾಡಿದ ಸಂಸದ ಬಿ. ವೈ. ರಾಘವೇಂದ್ರ

ನಮ್ಮ ಕೃಷಿ ಇಲಾಖೆ (ಶಿವಮೊಗ್ಗ) ಇವರ ಅನುಷ್ಠಾನದೊಂದಿಗೆ, 2023-24ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅನುದಾನದ ಅಡಿಯಲ್ಲಿ ಈ ಅತ್ಯಾಧುನಿಕ ಮಣ್ಣು ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ. ಧ್ಯೇಯ: “ನಿಮ್ಮ ಮಣ್ಣನ್ನು ತಿಳಿಯಿರಿ” (Know Your Soil) ಎಂಬ ಮಂತ್ರದೊಂದಿಗೆ ನಮ್ಮ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಡಿಜಿಟಲ್ ಹಾಗೂ ವೈಜ್ಞಾನಿಕ ಕೃಷಿಯ ಸೌಲಭ್ಯವನ್ನು ಹತ್ತಿರವಾಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು . ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಣ್ಣಿನ ಗುಣಮಟ್ಟ ಕಾಪಾಡಲು ಇಂತಹ ತಾಂತ್ರಿಕ ಸೌಲಭ್ಯಗಳು […]

Continue Reading

ಶಿವಮೊಗ್ಗ | ಮಳೆ’ ಗಾಳಿಯಿಂದ ಅಪಾರ ಹಾನಿ ; ಕೂಡಲೇ ಸೂಕ್ತ ಪರಿಹಾರಕ್ಕೆ ಆಗ್ರಹ

ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಎನ್. ಕೆ. ಜಗದೀಶ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಾಯಿತು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಅವರು ಧನಂಜಯ್ ಸರ್ಜಿ ಅವರು ಶಿವಮೊಗ್ಗ ಗ್ರಾಮಾಂತರದ […]

Continue Reading

ಶಿವಮೊಗ್ಗ | ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Continue Reading

ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ

ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್‌ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್‌ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading