ಶಿವಮೊಗ್ಗ | ಭದ್ರಾ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು ಹಾಗೂ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಅಧ್ಯಕ್ಷರು, “ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿ ಹಿರಿದಾದುದು. ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ನೀರನ್ನು ಮಿತವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಸಹಕಾರ ಸಂಘಗಳನ್ನು ವಿವಿಧೋದ್ದೇಶ ಸಂಘಗಳನ್ನಾಗಿ ಪರಿವರ್ತಿಸಿ, ಅವುಗಳಿಂದ ದೊರೆಯುವ ಸೌಲಭ್ಯಗಳನ್ನು ಗರಿಷ್ಠ ಮಟ್ಟದಲ್ಲಿ ಪಡೆದುಕೊಳ್ಳಬೇಕು ಹಾಗೂ ರೈತರೆಲ್ಲರೂ ಒಗ್ಗಟ್ಟಿನಿಂದ ಬೆಳೆ ಬೆಳೆಯಬೇಕು” ಎಂದು ಕರೆ ನೀಡಿದರು.​ ಕೃಷಿ ಯಂತ್ರೋಪಕರಣಗಳ ವಿತರಣೆ:ಕಾರ್ಯಕ್ರಮದ ಅಂಗವಾಗಿ ಅರ್ಹ ನೀರು ಬಳಕೆದಾರ ಸಹಕಾರ ಸಂಘಗಳಿಗೆ ಕಾಡಾ ಪ್ರಾಧಿಕಾರದ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು […]

Continue Reading

ಶಿವಮೊಗ್ಗ | ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಟ್ರಾಫಿಕ್ ಪೊಲೀಸ್ ಸಭೆ

ಶಿವಮೊಗ್ಗ ಇ-ಪೇಪರ್ನಗರದಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದಲ್ಲಿ, ಸಾರ್ವಜನಿಕರು ಆ ಕುರಿತಾದ ಫೋಟೋ, ವಿಡಿಯೋ ಹಾಗೂ ವಾಹನಕ್ಕೆ ಸಂಬಂಧಿಸಿದ ನಿಖರ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Continue Reading

ಶಿವಮೊಗ್ಗ | ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ : ಬಿ.ವೈ. ರಾಘವೇಂದ್ರ

ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್‌ಪಾಸ್‌ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್‌ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. […]

Continue Reading

ಶಿವಮೊಗ್ಗ | ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಿ : ಸಂಸದ ಬಿ.ವೈ.ಆರ್ ಸೂಚನೆ

ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು […]

Continue Reading