ಶಿವಮೊಗ್ಗ | ಸಸ್ಯಹಾರಿ – ಮಾಂಸಹಾರಿ ಫುಡ್‌ಕೋರ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದ ಉಪವಿಭಾಗಾಧಿಕಾರಿ ; ಸ್ವಚ್ಚತೆ ಕಾಪಾಡಿಕೊಳ್ಳದಿದ್ದಲ್ಲಿ ಪರವಾನಿಗೆ ರದ್ದು : ಡಾ.ಮೈತ್ರಿ
ಇದೇ ಸಂದರ್ಭದಲ್ಲಿ ಕೆಲವು ಅಂಗಡಿಗಳಲ್ಲಿ ತಯಾರಾದ ಖಾದ್ಯಗಳಲ್ಲಿ ರಾಸಾಯನಿಕಗಳ ಬಳಕೆ ಆಗಿರುವ ಬಗ್ಗೆ ಅನುಮಾನ ಬಂದ ಕೆಲವು ಅಂಗಡಿಗಳ ಖಾದ್ಯ ತುಣುಕುಗಳ ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಂಡ ಅವರು, ಉತ್ತಮ ಗುಣಮಟ್ಟದ ಎಣ್ಣೆಯನ್ನು ಬಳಸಬೇಕು. ಆಹಾರ ತಯಾರಿಕಾ ಸ್ಥಳದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ಅಂಗಡಿಗಳ ಮಾಲೀಕರಿಗೆ ಸೂಚಿಸಿದ ಅವರು, ಸಮಗ್ರ ಪರಿಶೀಲನಾ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|ಚಂದ್ರಶೇಖರ್, ಕಂದಾಯಾಧಿಕಾರಿ ಸತೀಶ್, ದೀಪಕ್, ದೊಡ್ಡಬಸಪ್ಪರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.
Continue Reading




