ಸಾಗರ | ಹಿರಿಯ ಪತ್ರಕರ್ತ ಓಂಕಾರ ಎಸ್.ವಿ ತಾಳಗುಪ್ಪ ವಿಧಿವಶ

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಸದ್ಗತಿಯನ್ನು ನೀಡಲಿ ಕುಟುಂಬ ವರ್ಗದವರಿಗೆ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ನಮ್ಮ ಇ-ಕನ್ನಡ ಮಾಧ್ಯಮದಿಂದ ಹಿರಿಯ ಪತ್ರಕರ್ತ ಓಂಕಾರ್. ಎಸ್. ತಾಳಗುಪ್ಪ ಅವರ ನಿಧನಕ್ಕೆ ಸಂತಾಪ ಸುಚಿಸುತ್ತಿದ್ದೇವೆ.

Continue Reading

ಸಾಗರ | ಬಗರ್‌ಹುಕುಂ ಸಾಗುವಳಿ ತೆರವುಗೊಳಿಸದಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಸೂಚನೆ

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರತಿಕ್ರಿಯಿಸಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ಹಾಗೂ ಅರಣ್ಯ ಭೂಮಿಯ ಜಂಟೀ ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಯವರು ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಕಾರ್ಮಿಕ ವಸತಿ ಶಾಲೆ ಮಂಜೂರಾತಿಯಾಗಿದ್ದು, ಸದರಿ ವಸತಿ ಶಾಲೆಗೆ ಕಂದಾಯ ಇಲಾಖೆಯ ಜಾಗವನ್ನು ಕೂಡಲೇ ಗುರುತು ಮಾಡಿ, ಮಂಜೂರಾತಿ ನೀಡಲು ಜಿಲ್ಲಾಧಿಕಾರಿಯವರು ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್‌ರವರಿಗೆ ಸೂಚಿಸಿದರು. ಸಾಗರ ವಿಧಾನಸಭಾ ಕ್ಷೇತ್ರಕ್ಕೆ ೧೧೦/೧೧ ಕೆವಿ ವಿದ್ಯುತ್ […]

Continue Reading

ಸಾಗರ | ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಸಾವು

ಸೊರಬ ತಾಲ್ಲೂಕಿನ ಉಳವಿಯ ನಿವಾಸಿಯಾಗಿದ್ದ ಶ್ವೇತಾ ಅದೇ ಊರಿನ ನವೀನ್ ಎಂಬುವವರೊಂದಿಗೆ ಕಳೆದ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದರು.ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಸಹ ಇದೆ. ಶ್ವೇತಾ ಈಗ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದ್ದು,ತನ್ನ ಅತ್ತೆಯ ಮನೆಯ ಹಿಂಭಾಗದಲ್ಲೇ ಈ ದಂಪತಿಗಳು ವಾಸವಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ ಎನ್ನಲಾಗುತ್ತಿದೆ. ಕುಟುಂಬದಲ್ಲಿ ಉಂಟಾದ ಮನಸ್ತಾಪ ಶ್ವೇತಾ ಈ ನಿರ್ಧಾರ ತೆಗೆದುಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತಳ ಪಾರ್ಥೀವ ಶರೀರ […]

Continue Reading

ಸಾಗರ | ಯುದ್ಧ ನಿಂತು ಜಗತ್ತಿನಲ್ಲಿ ಶಾಂತಿ ನೆಲೆಸಲಿ : ಶಾಸಕ ಗೋಪಾಲಕೃಷ್ಣ ಬೇಳೂರು

ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಇತಿಹಾಸ ಪ್ರಸಿದ್ದವಾದ ಗಣಪತಿ ರಥೋತ್ಸವ ಯಶಸ್ವಿಯಾಗಿ ನಡೆದಿದೆ. ಜಾತ್ರೆ ಯಶಸ್ಸಿಗೆ ಬೇಕಾದ ಅಗತ್ಯ ಸಿದ್ದತೆ ಮಾಡಿಕೊಡಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದಾರೆ. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅತ್ಯಂತ ಅಚ್ಚುಕಟ್ಟಾಗಿ ಜಾತ್ರೋತ್ಸವಕ್ಕೆ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಿದರು. ಪ್ರಪಂಚದಲ್ಲಿ ಯುದ್ದದ ವಾತಾವರಣ ಕವಿದಿದ್ದು, ಇರಾನ್, ಇಸ್ರೇಲ್ ಮತ್ತು ಅಮೇರಿಕಾ ನಡುವಿನ ಯುದ್ದ ಜಾಗತಿಕ ಶಾಂತಿಗೆ ಧಕ್ಕೆಯುಂಟು ಮಾಡಿದೆ. […]

Continue Reading

ಸಾಗರ | ಬಸ್ ನಿಲ್ದಾಣ ನಿರ್ಮಿಸಿ ; ಎಬಿವಿಪಿ ಮನವಿ

ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ಎಲ್.ಬಿ.ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ., ಸುಜಿತ್ ಡಿ., ಪ್ರಜ್ವಲ್, ನಿತಿನ್ ಕುಮಾರ್ ಇನ್ನಿತರರು ಹಾಜರಿದ್ದರು.

Continue Reading

ಕಾಗೋಡು ತಿಮ್ಮಪ್ಪ ಅವರಿಂದ ಜನ್ಮದಿನದ ಆಶೀರ್ವಾದ ಪಡೆದ ಮಧು ಬಂಗಾರಪ್ಪ

ಈಗಾಗಲೆ ನ್ಯಾಯಾಲಯ ಉತ್ತಮವಾಗಿ ಸ್ಪಂದಿಸುತ್ತಿದೆ, ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ. ಶರಾವತಿ, ಚಕ್ರ, ವರಾಹಿ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈಗ ಭಾಷಣ ಹೊಡೆಯುವವರು ಹಿಂದೆ ಅಧಿಕಾರದಲ್ಲಿದ್ದಾಗ ಪರಿಭಾವಿತ ಅರಣ್ಯ ಕಾಯ್ದೆ ಜಾರಿಗೆ ತಂದಿದ್ದರು. ಡೀಮ್ಡ್ ಫಾರೆಸ್ಟ್ ಕಾಯ್ದೆ ತಿದ್ದುಪಡಿಗೆ ಸಹ ಅವಕಾಶ ಸಿಕ್ಕಿದೆ. ನ್ಯಾಯಾಲಯ ಆದೇಶ ಹೊರತುಪಡಿಸಿ ಇತರೆ ಸಂದರ್ಭದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೀಪಾ ಕಾಗೋಡು, ಅನಿತಾ […]

Continue Reading

ಶಿವಮೊಗ್ಗ | ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ; ರೈತರಿಗೆ ಸಚಿವ ಮಧು ಬಂಗಾರಪ್ಪ ಅಭಯ

ಈ ಕುರಿತು ಸಂಬಂಧಪಟ್ಟ ಸಮಿತಿಗಳು ಮೇಲ್ಮನವಿ ಸಲ್ಲಿಸುವ ಅಗತ್ಯವಿದೆ. ಸಂಬಂಧಪಟ್ಟ ಸಮಿತಿಗಳ ಮೂಲಕ ಈ ಅರ್ಜಿಗಳ ಮರುಪರಿಶೀಲನೆ ಮತ್ತು ಮೇಲ್ಮನವಿ ಸಲ್ಲಿಕೆಗೆ ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ಸರ್ಕಾರವು ರೈತರ ಮತ್ತು ಸಂತ್ರಸ್ತರ ಹಿತ ಕಾಯಲು ಸಂಪೂರ್ಣವಾಗಿ ಬದ್ಧವಾಗಿದ್ದು, ಯಡಮನೆ ಗ್ರಾಮದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

Continue Reading