ಶಿವಮೊಗ್ಗ | ಕೇಂದ್ರ ಸರ್ಕಾರದಿಂದ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

“ಶಿವಮೊಗ್ಗದ ಬಹುಕಾಲದ ಸಂಚಾರ ದಟ್ಟಣೆ ಮತ್ತು ಸಂಪರ್ಕದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಗೆ ಬೆಂಬಲ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಜಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಕಾಮಗಾರಿ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳುವವರೆಗೂ ನಿರಂತರವಾಗಿ ಅನುಸರಿಸಿ, ಶಿವಮೊಗ್ಗ ಹಾಗೂ ಮಲೆನಾಡಿನ ಜನರಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳುತ್ತೇನೆ”ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

Continue Reading