ಜೀರೋ ಟ್ರಾಫಿಕ್‌ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಬಂದ ಮಗು ಕೆಲವೇ ನಿಮಿಷದಲ್ಲಿ ದುರ್ಮರಣ..!

ಮಗುವಿನ ತುರ್ತು ಚಿಕಿತ್ಸೆಗಾಗಿ ದಾವಣಗೆರೆ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲಾ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಂಡಿದ್ದರು. ಹೊನ್ನಾಳಿಯಿಂದ ಶಿವಮೊಗ್ಗದವರೆಗೆ ಸಂಚಾರ ಪೊಲೀಸರು ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟರು. ಆದರೆ ದಾವಣಗೆರೆಯಿಂದ ಹೊರಟ ಆಂಬುಲೆನ್ಸ್‌ ಚಕ್ರಕ್ಕೆ ಹೊನ್ನಾಳಿ ಬಳಿ ಸ್ಕ್ರೂ ಸಿಲುಕಿ ಪಂಕ್ಚರ್ ಆಗಿತ್ತು. ಚಕ್ರ ಬದಲಿಸಲು ಸುಮಾರು 20 ನಿಮಿಷ ತಡವಾಗಿದ್ದರಿಂದ ಮಗುವಿನ ಉಸಿರಾಟದ ಸಮಸ್ಯೆ ಮತ್ತಷ್ಟು ಗಂಭೀರವಾಯಿತು.‌ ಮಗುವಿನ ಆಗಮನದ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ ತುರ್ತು […]

Continue Reading