ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್‌ ಪರ ಹೈಕೋರ್ಟ್‌ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.

Continue Reading

ಶಿವಮೊಗ್ಗ | ಕುವೆಂಪು ವಿವಿ,ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ ; 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಸೇರಿದಂತೆ 15 ಪ್ರಮುಖ ನಾಯಕರು ಹಾಗೂ ಇತರ 30ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಬಿಎನ್ಎಸ್ (BNS) 2023ರ ವಿವಿಧ ಕಠಿಣ ಕಲಂಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ. ಶೇ. 98ರಷ್ಟು ಸಮಸ್ಯೆ ಪರಿಹರಿಶಲಾಗಿದೆ: ಕುಲಸಚಿವ ಹೇಮಂತ್ ಸ್ಪಷ್ಟನೆ ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿವಿ ಪ್ರಭಾರ ಕುಲಸಚಿವ ಹಾಗೂ ಜಿ.ಪಂ. ಸಿಇಒ ಹೇಮಂತ್ ಅವರು, ಪ್ರತಿಭಟನೆಯ ಹೆಸರಿನಲ್ಲಿ ನಡೆದ ದಾಂಧಲೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಅಂಕಪಟ್ಟಿ […]

Continue Reading

ಜನಗಣತಿ ಕರ್ತವ್ಯಕ್ಕೆ ಅಡ್ಡಿ ; ಮಹಿಳಾ ಸಿಬ್ಬಂದಿಗೆ ಅವಮಾನ ದಾಖಲಾಯಿತು FIR

ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಗಣತಿದಾರರಾದ ಶ್ರೀಮತಿ ವೀಣಾ ಅವರು ಏಪ್ರಿಲ್ 20ರಂದು ಆರ್.ಟಿ. ನಗರದ ಸುಲ್ತಾನಪಾಳ್ಯದ ಪೇರಿ ಮೊನಾರ್ಕ್ ಅಪಾರ್ಟ್‌ಮೆಂಟ್‌ಗೆ ಮಾಹಿತಿ ಸಂಗ್ರಹಿಸಲು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ನಿವಾಸಿಯೊಬ್ಬರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಏಪ್ರಿಲ್ 25ರಂದು ಮೇಲ್ವಿಚಾರಕರಾದ ಶ್ರೀಮತಿ ರಶ್ಮಿ ಆರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕೇಳಿದಾಗ, ಆ ನಿವಾಸಿಯು ಗಣತಿ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಮಹಿಳಾ ಸಿಬ್ಬಂದಿಯೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ. ಸಿಬ್ಬಂದಿ […]

Continue Reading

ದ್ವಿಪೌರತ್ವ ಪ್ರಕರಣ : ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಅದೇಶಿಸಿದ ಅಲಹಾಬಾದ್ ಹೈಕೋರ್ಟ್

ಜನವರಿ 28ರಂದು ಲಕ್ನೋದ ವಿಶೇಷ ಸಂಸದ ಮತ್ತು ಶಾಸಕ ನ್ಯಾಯಾಲಯವು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ತನಗೆ ಇಲ್ಲ ಎಂದಿದ್ದ ವಿಶೇಷ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ವಿಷಯದಲ್ಲಿ […]

Continue Reading